ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ಕೆಂದ್ರದಲ್ಲಿ ಪ್ರಸಕ್ತ ಸಾಲಿಗೆ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಲಿಬ್ ಐ.ಎಸ್ಸಿ, ಬಿ.ಬಿ.ಎ, ಬಿ.ಎಸ್ಸಿ, ಬಿ.ಸಿ.ಎ, ಬಿ.ಎಡ್, ಎಂ.ಎ, ಎಂಕಾ, ಎಂ.ಬಿ.ಎ, ಎಂಎಸ್ಸಿ, ಎಂ.ಲಿ.ಬ್‌ಐ.ಎಸ್.ಸಿ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಅರ್ಜಿ ಜೊತೆ ದಾಖಲಾತಿಗಳನ್ನು ಪ್ರಾದೇಶಿಕ ಕೇಂದ್ರಕ್ಕೆ ಸಲ್ಲಿಸಿ ಗುರುತಿನ ಪತ್ರ ಮತ್ತು ಸಿದ್ಧಪಾಠಗಳನ್ನು ಪಡೆಯಬಹುದು.
ಬಿ.ಎಡ್ ಶಿಕ್ಷಣ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಮಾರ್ಚ್ 27 ಕೊನೆಯ ದಿನವಾಗಿದ್ದು, ಬಿ.ಎಡ್‌ಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಏಪ್ರಿಲ್ 3 ರಂದು ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಕ.ರಾ.ಮು.ವಿ ವೆಬ್‌ಸೈಟ್ www.ksoumysuru.ac.in ಅಥವಾ ಉಡುಪಿ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.