ಉಡುಪಿ: ಕುಂದಾಪುರದ ಪ್ರಧಾನ ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿಯನ್ನು ಕಚೇರಿಯ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯ ವರೆಗೆ ಮಾಡಲಾಗುವುದು.
ಹಾಗೆ, ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಸಹ ಪುನಃ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಈ ಎಲ್ಲಾ ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.