ಉಡುಪಿ: ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ಸಂಬoಧಿಸಿದoತೆ ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ, ಸ್ನಾತ್ತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ವಿದ್ಯಾರ್ಥಿಯು ನೇರವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಡ್ಮಿಶನ್ ಲಿಂಕ್ https://minority.ksouportal.com ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in ಅಥವಾ ಸಹಾಯವಾಣಿ: 9900667916, 9113512565, 9611418726, 9900509959, 9035395137 ಮತ್ತು 9900509959 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ : 0820-2574596 ಹಾಗೂ ಕಾರ್ಕಳ (ದೂ.ಸಂಖ್ಯೆ: 08258-231101) ಮತ್ತು ಕುಂದಾಪುರ (ದೂ.ಸಂಖ್ಯೆ: 08254-230370) ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.















