ಉಡುಪಿ: ಸೆಪ್ಟೆಂಬರ್ 7ರಿಂದ 19ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೊಂದಾಯಿಸಿಕೊಂಡ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡರು ಸಹ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಉಡುಪಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಭಗವಂತ ಕಟ್ಟಿಮನಿ ತಿಳಿಸಿದ್ದಾರೆ.
ಕೊರೊನಾ ಸೋಂಕು ಕಂಡುಬರುವ ವಿದ್ಯಾರ್ಥಿಗಳಿಗೆ ಬನ್ನಂಜೆ ಬಾಲಕಿಯರ ವಸತಿ ನಿಲಯ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿರುವ ಪ್ರತ್ಯೇಕ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಸೋಂಕು ಇದ್ದರೆ ಮೊದಲೇ ತಿಳಿಸಿ:
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಲ್ಲಿ, ತಮ್ಮ ಕಾಲೇಜಿನ ಪ್ರಾಂಶುಪಾಲರಿಗೆ, ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಅಥವಾ ಉಪ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 0820 2575 891 ಮಾಹಿತಿ ನೀಡಿದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದರು.