ಬೆಂಗಳೂರು: ರಾಜ್ಯ ವಿಧಾನಸಭೆಯ ಒಳಗೆ ವೀರ್ ಸಾವರ್ಕರ್ ಅವರ ಭಾವಚಿತ್ರವನ್ನು ಹಾಕಿರುವ ಕರ್ನಾಟಕ ಬಿಜೆಪಿ ಸರ್ಕಾರದ ಕ್ರಮವು ವಿಧಾನಸೌಧ ಕಟ್ಟಡದ ಮೆಟ್ಟಿಲುಗಳ ಮೇಲೆ ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಯಿತು.
ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವೀರ ಸಾವರ್ಕರ್ ಭಾವಚಿತ್ರವನ್ನು ಅನಾವರಣಗೊಳಿಸಿದರು. ಆದರೆ ವಿರೋಧ ಪಕ್ಷಗಳು ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕರ್ನಾಟಕ ವಿಧಾನಸಭೆಯಲ್ಲಿ ವಿವಾದಾತ್ಮಕ ವ್ಯಕ್ತಿಯನ್ನು ಪ್ರದರ್ಶಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.
ವೀರ ಸಾವರ್ಕರ್ ಬಗ್ಗೆ ಜಾಗೃತಿ ಮೂಡಿಸುವ ರಾಜ್ಯಾದ್ಯಂತ ಅಭಿಯಾನದ ಭಾಗವಾಗಿ ಬಿಜೆಪಿಯು ಸ್ವಾತಂತ್ರ್ಯ ಸೇನಾನಿಯ ಭಾವಚಿತ್ರವನ್ನು ಪ್ರದರ್ಶಿಸಲು ಮುಂದಾಗಿದೆ.
1950 ರಲ್ಲಿ ಸಾವರ್ಕರ್ ಅವರನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ನಾಲ್ಕು ತಿಂಗಳ ಕಾಲ ಬಂಧನದಲ್ಲಿ ಇರಿಸಲಾಗಿತ್ತು. ಮುಂಬೈನಲ್ಲಿ ಬಂಧನ ಆದೇಶ ಹೊರಡಿಸಲಾಗಿದ್ದು, ಬೆಳಗಾವಿಗೆ ಆಗಮಿಸುತ್ತಿದ್ದಂತೆ ಅವರನ್ನು ಬಂಧಿಸಲಾಗಿತ್ತು.ಪಾಕಿಸ್ತಾನದ ಮಾಜಿ ಪ್ರಧಾನಿ ಲಿಯಾಕತ್ ಅಲಿ ಖಾನ್ ಅವರ ದೆಹಲಿ ಭೇಟಿಯ ವಿರುದ್ಧ ಪ್ರತಿಭಟನೆ ನಡೆಸುವುದನ್ನು ತಡೆಯಲು ಅವರನ್ನು ತಡೆಗಟ್ಟುವ ಬಂಧನದಲ್ಲಿ ಇರಿಸಲಾಗಿತ್ತು. ಬೆಳಗಾವಿ ಅಧಿವೇಶನಕ್ಕೂ ಮುನ್ನ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ವಿದಾನಸಭೆಯೊಳಗೆ ಅನಾವರಣಗೊಳಿಸಿರುವ ಬಗ್ಗೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ.
ಪ್ರತಿಭಟನೆ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆಯೊಳಗೆ ಏನಾಗುತ್ತದೆ ಎಂಬುದನ್ನು ಸ್ಪೀಕರ್ ನಿರ್ಧರಿಸುತ್ತಾರೆ. ನಾನು ನಮ್ಮ ನಾಯಕರು ಮತ್ತು ಪ್ರತಿಪಕ್ಷಗಳ ಜೊತೆಯೂ ಮಾತನಾಡುತ್ತೇನೆ ಎಂದಿರುವುದಾಗಿ ವರದಿಯಾಗಿದೆ.