ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಗರದ ಜಿಲ್ಲಾ ಬಾಲಭವನದಲ್ಲಿ ನಡೆದ ದೇಶಭಕ್ತಿ ಗೀತೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಪುರಸಭಾ ಸದಸ್ಯ ಟಿ.ಜಿ.ಹೆಗಡೆ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. 100 ಕ್ಕೂ ಅಧಿಕ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.