ಕುಂದಾಪುರ: ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕುಂದಾಪುರದ ಸ್ನಾತಕೋತ್ತರ ಅಧ್ಯಯನ ವಿಭಾಗದ ವತಿಯಿಂದ ಎಂಬಿಎ ಮತ್ತು ಎಂಸಿಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರಿ ವ್ಯವಸ್ಥಾಪಕ ನಿರ್ದೇಶಕರಾದ ಸಂಪತ್ ಶೆಟ್ಟಿ ಅವರು ಮಾತನಾಡಿ, ಯಶಸ್ಸು ಸಾಧಿಸಲು ಕನಸುಗಳು, ಆತ್ಮವಿಶ್ವಾಸ ಮತ್ತು ಸರಿಯಾದ ಆಯ್ಕೆಗಳು ಅತ್ಯಂತ ಮುಖ್ಯ ಎಂದು ತಿಳಿಸಿದರು. ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿಯನ್ನು ಹೊಂದಿ, ತಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟುಕೊಂಡು, ಸೂಕ್ತ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಯಶಸ್ಸಿನ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಮಕೃಷ್ಣ ಹೆಗ್ಡೆ ಅವರು ಪ್ರಥಮ ವರ್ಷದ ಎಂಬಿಎ ಮತ್ತು ಎಂಸಿಎ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಐ ಎಂ ಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್. ಎನ್. ಭಟ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳು ಸರ್ವೋತೋಮುಖ ಅಭಿವೃದ್ಧಿಯನ್ನು ಹೇಗೆ ಸಾಧಿಸಬಹುದು ಎಂದು ತಿಳಿಸಿದರಲ್ಲದೆ ವೃತ್ತಿಪರ ಸ್ನಾತಕೋತ್ಸವ ಪದವಿಯಲಭವನ್ನು ಹೇಗೆ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. ಸುಚಿತ್ರಾ ಪೂಜಾರಿ ಅವರು ಸ್ವಾಗತ ಭಾಷಣ ಮಾಡಿದರು. ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರಸನ್ನ ಕುಮಾರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಎಂಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿಯರಾದ ಅದಿತಿ ಮತ್ತು ರಕ್ಷಿತಾ ಆರ್. ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮವು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಶೈಕ್ಷಣಿಕ ವಾತಾವರಣ, ಉನ್ನತ ಶಿಕ್ಷಣದ ಮಹತ್ವ ಮತ್ತು ಭವಿಷ್ಯದ ಗುರಿಗಳ ಬಗ್ಗೆ ಅರಿವು ಮೂಡಿಸುವಲ್ಲಿ ಸಹಕಾರಿಯಾಯಿತು.















