ಉಡುಪಿ: ಕೇಂದ್ರದ ಮಾಜಿ ಸಚಿವರು, ರಾಜ್ಯಸಭಾ ಸದಸ್ಯರಾಗಿರುವ ದಿ. ಓಸ್ಕರ್ ಫೆರ್ನಾಂಡಿಸ್ ಸ್ಮರಣಾರ್ಥ ಅಕ್ಟೋಬರ್ 16ರಂದು (ನಾಳೆ) ಶನಿವಾರ ಸಂಜೆ 5.30ಕ್ಕೆ ‘ನುಡಿನಮನ’ ಕಾರ್ಯಕ್ರಮ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ವಠಾರದಲ್ಲಿ ನಡೆಯಲಿದೆ.
ಓಸ್ಕರ್ ಫೆರ್ನಾಂಡಿಸ್ ದಿವಂಗತರಾಗಿ ಒಂದು ತಿಂಗಳು ಪೂರ್ಣಗೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಸಂಜೆ 3.30ಕ್ಕೆ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದಲ್ಲಿ ಪವಿತ್ರ ಪೂಜೆ ನಡೆಯಲಿದೆ. 3 ಗಂಟೆಗೆ ಝೇವಿಯರ್ ಸಭಾಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದ್ದು, 5.30ಕ್ಕೆ ನುಡಿನಮನ ಕಾರ್ಯಕ್ರಮ ದೇವಾಲಯದ ವಠಾರದಲ್ಲಿ ಜರಗಲಿದೆ.
ಕಾರ್ಯಕ್ರಮದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಹರೀಶ್ ಕುಮಾರ್, ಉಡುಪಿ ಧರ್ಮಪ್ರಾಂತದ ಕುಲಪತಿ ಅ. ವ. ಫಾ. ಸ್ಟ್ಯಾನಿ ಬಿ ಲೋಬೊ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯಕುಮಾರ್ ಸೊರಕೆ, ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಐವನ್ ಡಿಸೋಜ, ಜೆ ಆರ್ ಲೋಬೊ, ಗೋಪಾಲ ಪೂಜಾರಿ, ಯು ಆರ್ ಸಭಾಪತಿ, ಮೊಯ್ದೀನ್ ಬಾವ, ವಿಜಯ ಕುಮಾರ್ ಶೆಟ್ಟಿ, ಪ್ರತಾಪ್ ಚಂದ್ರ ಶೆಟ್ಟಿ, ಶಕುಂತಲಾ ಶೆಟ್ಟಿ, ಮುಖಂಡರಾದ ಮಿಥುನ್ ರೈ, ಸುರೇಶ್ ಶೆಟ್ಟಿ, ಗುರ್ಮೆ, ಮುನಿಯಾಲು ಉದಯಕುಮಾರ್ ಶೆಟ್ಟಿ, ಅಶೋಕ್ ಕುಮಾರ್ ಕೊಡವೂರು, ಎಂ ಎ ಗಫೂರ್, ರೋಹನ್ ಮೊಂತೇರೋ ಮತ್ತಿತರರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಬಳಿಕ ಸರ್ವರಿಗೂ ಭೋಜನದ ವ್ಯವಸ್ಥೆ ಮಾಡಲಾಗಿದೆ ಎಂದು ದಿವಂಗತ ಓಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ಅಧ್ಯಕ್ಷ ರೊನಾಲ್ಡ್ ಮನೋಹರ್ ಕರ್ಕಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.