ಡಾ.ಜಿ. ಶಂಕರ್ ಸರಕಾರಿ ಕಾಲೇಜಿನ ನಾಲ್ವರು ಸಹಪ್ರಾಧ್ಯಾಪಕರಿಗೆ ಪ್ರಾಧ್ಯಾಪಕ ಹುದ್ದೆಗೆ ಪದೋನ್ನತಿ

ಉಡುಪಿ: ಅಜ್ಜರಕಾಡಿನಲ್ಲಿರುವ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಾಲ್ಕು ಮಂದಿ ಸಹಪ್ರಾಧ್ಯಾಪಕರಿಗೆ ಪ್ರಾಧ್ಯಾಪಕ ಹುದ್ದೆಗೆ ಪದೋನ್ನತಿ ನೀಡಿ ಸರಕಾರ ಆದೇಶ ಹೊರಡಿಸಿದೆ.

ಕಾಲೇಜಿನ ಪ್ರಾಂಶುಪಾಲ, ಇತಿಹಾಸಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಶೆಟ್ಟಿ, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಪ್ರಸಾದ್ ಕೆ., ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ನಿಕೇತನ, ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ. ರವಿರಾಜ್ ಶೆಟ್ಟಿ ಅವರನ್ನು ಪ್ರೊಫೆಸರ್ ಹುದ್ದೆಗೆ ನೇಮಿಸಲಾಗಿದೆ.

ಇದೇ ಮೊದಲ ಬಾರಿಗೆ ಕಾಲೇಜು ಶಿಕ್ಷಣ ಇಲಾಖೆ ಪ್ರಾಧ್ಯಾಪಕ ಹುದ್ದೆಯನ್ನು ನೀಡಿ ಆದೇಶಿಸಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜುಗಳಲ್ಲಿ ಅತಿ ಹೆಚ್ಚು ಪ್ರಾಧ್ಯಾಪಕರ ಹುದ್ದೆಯನ್ನು ಪಡೆದ ಕಾಲೇಜು ಎಂಬ ಕೀರ್ತಿಗೆ ಡಾ.ಜಿ. ಶಂಕರ್ ಸರಕಾರಿ ಕಾಲೇಜು ಪಾತ್ರವಾಗಿದೆ.

ಉಳಿದಂತೆ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕ ಡಾ.ಜಯಪ್ರಕಾಶ್ ಶೆಟ್ಟಿ ಎಚ್, ಇತಿಹಾಸ ಸಹ ಪ್ರಾಧ್ಯಾಪಕ ಡಾ.ಕೆ ಸುರೇಶ ರೈ, ಅರ್ಥಶಾಸ್ತ್ರ ಸಹಪ್ರಾಧ್ಯಾಪಕ ಡಾ.ಗಾವ್ ಕರ್ ಗೋಪಾಲ ಕೃಷ್ಣ ಎನ್, ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕ ಡಾ. ನರೇಂದ್ರ ರೈ ಡಿ(ದೇರ್ಲ), ಕಾವೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಸಹ ಪ್ರಧ್ಯಾಪಕಿ ಡಾ ಗೀತಾ ಎಂ ಎಲ್, ಮಂಗಳೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಸ್ಯಶಾಸ್ತ್ರ ಸಹ ಪ್ರಾಧ್ಯಾಪಕ ಡಾ.ಜಯಕರ ಬಂಡಾರಿ ಎಂ, ಡಾ. ದಯಾನಂದ ಪೈ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಣಿಶಾಸ್ತ್ರ ಸಹ ಪ್ರಾಧ್ಯಾಪಕಿ ಡಾ ವಸಂತಿ ಪಿ ಇವರಿಗೆ ಪ್ರಾಧ್ಯಾಪಕ ಹುದ್ದೆಗೆ ಪದೋನ್ನತಿ ನೀಡಲಾಗಿದೆ.

ಪದೋನ್ನತಿ ಹೊಂದಿದ ಪ್ರಾಧ್ಯಾಪಕರ ಪಟ್ಟಿಯನ್ನು https://dce.karnataka.gov.in/storage/pdf-files/CIRCULARS%202022/Professor151220221_0001.pdf ಪ್ರಕಟಿಸಲಾಗಿದೆ.