ಮಣಿಪಾಲ: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗವು ಜುಲೈ 4ರಿಂದ ಜಾರಿಗೆ ಬರುವಂತೆ ಪ್ರತಿ ಶನಿವಾರ ಬೆಳಿಗ್ಗೆ 8ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ. ಹಾಗೆ ತಿಂಗಳ ಮೂರನೇ ಶನಿವಾರ, ಆಸ್ಪತ್ರೆಗೆ ಎಂದಿನಂತೆ ರಜೆ ಇರುತ್ತದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದರು. ಈ ನಿರ್ಧಾರವು ಆಡಳಿತ ಮಂಡಳಿಯ ಮುಂದಿನ ನಿರ್ಧಾರದ ತನಕ ಚಾಲ್ತಿಯಲ್ಲಿರುತ್ತದೆ. ಸೋಮವಾರದಿಂದ ಶುಕ್ರವಾರದವರೆಗೆ ಹೊರರೋಗಿ ವಿಭಾಗವು ಎಂದಿನಂತೆ ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಕಾರ್ಯನಿರ್ವಹಿಸುತ್ತದೆ.
ಅಪಘಾತ, ತುರ್ತು ಚಿಕಿತ್ಸಾ ವಿಭಾಗ ಮತ್ತು ಜ್ವರ ತಪಾಸಣಾ ಕೇಂದ್ರ ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.