ಶಿವಮೊಗ್ಗ ಮಕ್ಕಳ ದಸರಾ ಕರಾಟೆ ಪಂದ್ಯಾವಳಿಯಲ್ಲಿ ಎಕ್ಸಲೆಂಟ್ ಕಾಲೇಜು ವಿದ್ಯಾರ್ಥಿಗಳ ಅಮೋಘ ಪ್ರದರ್ಶನ

ಶಿವಮೊಗ್ಗ: ಶಿವಮೊಗ್ಗ ಮಹಾನಗರಪಾಲಿಕೆ, ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್, ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಪ್ರಾಯೋಜಕತ್ವದಲ್ಲಿ ಶಿವಮೊಗ್ಗ ಮಕ್ಕಳ ದಸರಾ 2022 ಅಂಗವಾಗಿ 2ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯು ನೆಹರು ಒಳಾಂಗಣ ಕ್ರೀಡಾಂಗಣ ಶಿವಮೊಗ್ಗ ಇಲ್ಲಿ ಸೆಪ್ಪಂಬರ್ 27 ರಂದು ನಡೆದಿದ್ದು, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿಘ್ನೇಶ್ ನಾಯಕ್ 45 ಕೆಜಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ, ದ್ವಿತೀಯ ವಿಜ್ಞಾನ ವಿಭಾಗದ ಮೊಹಮ್ಮದ್ ಅನೀಸ್ 55ಕೆಜಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ, ದ್ವಿತೀಯ ವಾಣಿಜ್ಯ ವಿಭಾಗದ ಸುಜನ್ ಶೆಟ್ಟಿ 50 ಕೆಜಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಆಯುಷ್ ಪುತ್ರನ್ 60 ಕೆಜಿ ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.

ಇವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದದವರು ಮತ್ತು ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.