ಅಹಮದಾಬಾದ್: ಬಿಪರ್‌ಜೋಯ್ ಚಂಡಮಾರುತವು ನಾಳೆ ಸಂಜೆ ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶ ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಯಿದೆ. ಚಂಡಮಾರುತವು ಪ್ರಸ್ತುತ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ನೆಲೆಗೊಂಡಿದ್ದು ಪೋರಬಂದರ್‌ನಿಂದ ನೈಋತ್ಯಕ್ಕೆ 350 ಕಿಲೋಮೀಟರ್ ದೂರದಲ್ಲಿದೆ.
ಚಂಡಮಾರುತ ಹಿನ್ನೆಲೆಯಲ್ಲಿ ಮಂಗಳವಾರ, ಗುಜರಾತ್‌ನ ಅಧಿಕಾರಿಗಳು ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಕರಾವಳಿ ಪ್ರದೇಶಗಳಿಂದ 37,800 ಜನರನ್ನು ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಹಲವಾರು ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ತಂಡಗಳು ಕಾರ್ಯಾಚರಣೆಗೆ ಸನ್ನದ್ದವಾಗಿವೆ. ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಲು ಸೇನೆಯು ಸಿದ್ಧವಾಗಿದೆ ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ಪ್ರವಾಹ ಪರಿಹಾರ ಸೇವೆಗಳನ್ನು ಕಾಯ್ದಿರಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆಯಲ್ಲಿ ಚಂಡಮಾರುತ ಸಂಬಂಧಿಸಿ ಗುಜರಾತ್‌ನ ಸನ್ನದ್ಧತೆಯನ್ನು ಪರಿಶೀಲಿಸಿದ್ದಾರೆ.
ಚಂಡಮಾರುತವು ನಾಳೆ ಸಂಜೆ ಕಚ್‌ನ ಮಾಂಡ್ವಿ ಮತ್ತು ಪಾಕಿಸ್ತಾನದ ಕರಾಚಿ ನಡುವೆ ಜಖೌ ಬಂದರಿನ ಬಳಿ ದಾಟುವ ನಿರೀಕ್ಷೆಯಿದೆ, ಗಾಳಿಯ ವೇಗ ಗಂಟೆಗೆ 125-135 ಕಿಮೀ ಗಂಟೆಗೆ 150 ಕಿಮೀ ವೇಗದಲ್ಲಿ ಬೀಸುತ್ತದೆ ಎಂದು ಅಹಮದಾಬಾದ್ ಹವಾಮಾನ ಇಲಾಖೆ ನಿರ್ದೇಶಕಿ ಮನೋರಮಾ ಮೊಹಂತಿ ಹೇಳಿದ್ದಾರೆ.
ಚಂಡಮಾರುತದಿಂದಾಗಿ ಅದಾಗಲೇ ಸಮುದ್ರದಲ್ಲಿ ರೌದ್ರ ಅಲೆಗಳು ಮೇಲೇಳುತ್ತಿದ್ದು, ಕರಾವಳಿ ತೀರವನ್ನು ಅಪ್ಪಳಿಸುತ್ತಿದೆ.