ಜಿಲ್ಲಾ ಕೇಂದ್ರಗಳಿಗೂ ಆಕ್ಸಿಜನ್ ಬಸ್ ಸೇವೆ ವಿಸ್ತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆಎಸ್ಆರ್ ಟಿಸಿಯು ಸ್ವಯಂ ಸೇವಾ ಸಂಸ್ಥೆಗಳ  ಸಹಭಾಗಿತ್ವದಲ್ಲಿ ನಾಳೆಯಿಂದ ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ನೀಡುವುದು ವಿಳಂಬವಾಗಿ ತೀವ್ರ ತೊಂದರೆಯಾಗುತ್ತಿದೆ. ಅಷ್ಟೇ ಅಲ್ಲ, ಆಸ್ಪತ್ರೆಯಲ್ಲಿ ಸ್ಥಳಾಭಾವದಿಂದ ರೋಗಿಗಳಿಗೆ ಅಲ್ಲಿ ಕುಳಿತು  ಕಾಯುವುದಕ್ಕೂ ಕಷ್ಟವಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಉಚಿತವಾಗಿ ಬಸ್ಸಿನಲ್ಲಿಯೇ ತುರ್ತು ಆಕ್ಸಿಜನ್ ಸೌಲಭ್ಯ ಒದಗಿಸಲು ಈ ನೂತನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.