ಪದ್ಮ ಪ್ರಶಸ್ತಿ 2023ರ ನಾಮನಿರ್ದೇಶನ: ಸೆಪ್ಟೆಂಬರ್ 15 ರವರೆಗೆ ಅವಕಾಶ

ನವದೆಹಲಿ: ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ಔಷಧ, ಸಮಾಜ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳಿಗಾಗಿ ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ವ್ಯತ್ಯಾಸವಿಲ್ಲದೆ ನೀಡಲಾಗುವ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿರುವ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪುರಸ್ಕಾರಗಳಿಗೆ ನಾಮನಿರ್ದೇಶನ ಸಲ್ಲಿಸುವ ಅವಕಾಶವನ್ನು ಈ ತಿಂಗಳ 15 ರವರೆಗೆ ತೆರೆದಿಡಲಾಗಿರುತ್ತದೆ.

ಪದ್ಮ ಪ್ರಶಸ್ತಿ- 2023ರ ನಾಮನಿರ್ದೇಶನ ಮತ್ತು ಶಿಫಾರಸುಗಳನ್ನು ಆನ್‌ಲೈನ್‌ನಲ್ಲಿ ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ ಮಾತ್ರ ಸ್ವೀಕರಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ. ಮುಂದಿನ ವರ್ಷದ ಗಣರಾಜ್ಯೋತ್ಸವದಂದು ಪ್ರಶಸ್ತಿಯನ್ನು ಪ್ರಕಟಿಸಲಾಗುತ್ತದೆ.