ಬೆಂಗಳೂರು: ಸಾಕ್ಷಿ ಟ್ರಸ್ಟ್ ಸಂಸ್ಥಾಪಕ, ಕಂಪ್ಯೂಟರ್ ಪ್ಯಾಟರ್ನ್ ರೆಕಗ್ನಿಷನ್ ಮತ್ತು ಮೆಷಿನ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ಮೂಲಭೂತ ಕೊಡುಗೆಗಳನ್ನು ನೀಡಿರುವ ಹಾಗೂ 25 ಸಾವಿರ ಋಗ್ವೇದ ಮಂತ್ರಗಳನ್ನು ಆಂಗ್ಲ ಭಾಷೆಗೆ ಅನುವಾದಿಸಿ, 50ಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಆರ್. ಎಲ್. ಕಶ್ಯಪ್ ತಮ್ಮ 85ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವಿವಾಹಿತರಾಗಿದ್ದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ವಿದ್ವಾನ್ ಆರ್.ಎಲ್.ಕಶ್ಯಪ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.