ಮೆಸ್ಕಾಂ ನೂತನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಡಿ.ಪದ್ಮಾವತಿ ನೇಮಕ

ಮಂಗಳೂರು: ಡಿ.ಪದ್ಮಾವತಿ ಅವರು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್‌ನ (ಮೆಸ್ಕಾಂ) ನೂತನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಬುಧವಾರದಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಅವರು ಮೂರು ವರ್ಷಗಳ ಕಾಲ ಮೆಸ್ಕಾಂ ನಿರ್ದೇಶಕರಾಗಿ (ತಾಂತ್ರಿಕ) ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

ಪದ್ಮಾವತಿ ಅವರು ಕಲಬುರಗಿ, ಮೈಸೂರು ಮತ್ತು ದಕ್ಷಿಣ ಕನ್ನಡದ ವಿದ್ಯುತ್ ಸರಬರಾಜು ಕಂಪನಿಗಳ ಸಹಾಯಕ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್, ಸೂಪರಿಂಟೆಂಡಿಂಗ್ ಇಂಜಿನಿಯರ್ ಮತ್ತು ಮುಖ್ಯ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸಿದ್ದಾರೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.