ಪಡುಬಿದ್ರಿ: ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿಯಾಗಿ ನವಿಲೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿ ಸ್ಕೂಟರ್ ಸವಾರ ರಸ್ತೆಯಂಚಿನ ಕಲ್ಲೊಂದಕ್ಕೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ
ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಬೆಳಪು ಪ್ರಸಾದ ನಗರ ನಿವಾಸಿ ಅಬ್ದುಲ್ (25) ಮೃತ ದುರ್ದೈವಿ. ಈತ ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪಡುಬಿದ್ರಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕೂಟರ್ ಸವಾರಿ ಮಾಡಿಕೊಂಡು ಉಚ್ಚಿಲ ಕಡೆಗೆ ತೆರಳುತಿದ್ದನು.
ಳೆ ನವಿಲೊಂದು ಹಾರಿಕೊಂಡು ಬಂದು ಢಿಕ್ಕಿಯಾಗಿದ್ದು, ಇದರ ಪರಿಣಾಮ ಅಬ್ದುಲ್ ಗಂಭೀರ ಗಾಯಗೊಂಡಿದ್ದರು. ಆ್ಯಂಬುಲೆನ್ಸ್ ಬರಲು ವಿಳಂಬವಾದ ಹಿನ್ನೆಲೆ ಸ್ಥಳೀಯ ಕಾರ್ತಿಕ್ ಎಂಬ ಯುವಕ ತನ್ನ ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದಾರಿ ಮಧ್ಯೆಯೇ ಅಬ್ದುಲ್ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ನವಿಲು ಕೂಡ ಸ್ಥಳದಲ್ಲೇ ಸಾವನ್ನಪ್ಪಿದೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.