ಪಡುಕೆರೆ: ಕಡಲು‌ ಪ್ರಕ್ಷುಬ್ದಗೊಂಡು ಕಡಲ್ಕೊರೆತದ ಭೀತಿ, ಅಧಿಕಾರಿಗಳ ಜತೆ ಜಿ.ಪಂ. ಅಧ್ಯಕ್ಷ ಭೇಟಿ

ಉಡುಪಿ: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕರೆಯಲ್ಲಿ ಕಡಲು ಪ್ರಕ್ಷುಬ್ದಗೊಂಡಿದ್ದು,  ಹೀಗಾಗಿ ಪಕ್ಕದಲ್ಲಿರುವ ಮನೆಗೆ ಅಪಾಯ ಎದುರಾಗಿದೆ.

ನೀರು ಮನೆಯಂಗಳ ದಾಟಿ ನದಿಯನ್ನು ಸೇರುತ್ತಿದ್ದು, ಕಡಲ್ಕೊರೆತ ಸಂಭವಿಸುವ ಸಾಧ್ಯತೆ ಎದುರಾಗಿದೆ.

ಈ ಬಗ್ಗೆ ಮಾಹಿತಿ ತಿಳಿದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅವರು ಮಂಗಳವಾರ ಆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ತುರ್ತಾಗಿ ಸೂಕ್ತ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ತಾ.ಪಂ. ಮಾಜಿ ಉಪಾಧ್ಯಕ್ಷ ಗಣೇಶ್ ಕುಮಾರ್ ಸಂಪಿಗೆ, ರವಿ ಪಡುಕರೆ, ಗ್ರಾಮ ಪಂಚಾಯಿತಿ ಸದಸ್ಯರು   ಮತ್ತು ಸ್ಥಳೀಯರು ಉಪಸ್ಥಿತರಿದ್ದರು.