ಪಾಕಿಸ್ತಾನ್ ಇಂಟರ್ ನ್ಯಾಷನಲ್ ಏರ್ಲೈನ್ಸ್’ಗೆ (ಪಿಐಎ) ಸೇರಿದ, ಸಿಬ್ಬಂದಿಯೂ ಸೇರಿ 107 ಜನರಿದ್ದ ವಿಮಾನವೊಂದು ಕರಾಚಿಯಲ್ಲಿ ಪತನಗೊಂಡಿದ್ದು, ಲ್ಯಾಂಡಿಂಗ್ಗೆ ಕೆಲವೇ ನಿಮಿಷಗಳು ಬಾಕಿ ಇರುವಾಗ ಪತನಗೊಂಡಿದೆ. ವಿಮಾನದಲ್ಲಿದ್ದವರ ಪೈಕಿ ಯಾರೊಬ್ಬರೂ ಬದುಕುಳಿದಿರುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಏರ್ ಬಸ್ ಎ320’ ವಿಮಾನವು ಲಾಹೋರ್ನಿಂದ ಕರಾಚಿಗೆ ತೆರಳುತ್ತಿತ್ತು.
ಕರಾಚಿ ವಿಮಾನ ನಿಲ್ದಾಣಕ್ಕೆ ಸನಿಹದಲ್ಲೇ ಇರುವ ವಸತಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ. ಆ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿರುವುದನ್ನು ಸ್ಥಳೀಯ ಸುದ್ದಿವಾಹಿನಿಗಳು ಪ್ರಸಾರ ಮಾಡಿವೆ.
ಪಾಕಿಸ್ತಾನ ಸೇನೆಯ ಕ್ಷಿಪ್ರ ಕಾರ್ಯಾಚರಣೆ ಪಡೆಯು ಸ್ಥಳಕ್ಕೆ ಧಾವಿಸಿ ರಕ್ಷಣ ವ್ಯವಸ್ಥೆ ಮಾಡುತ್ತಿದೆ.