ಮೊಬೈಲ್ Wi-Fi ಸರ್ಚಿಂಗ್​ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಯೂಸರ್ ನೇಮ್​: ಕ್ರಮಕ್ಕೆ ಸ್ಥಳೀಯರ ಆಗ್ರಹ

ಬೆಂಗಳೂರು: ಕೆಲವರು ಮೊಬೈಲ್ ವೈಫೈ ಕನೆಕ್ಷನ್​ ಸರ್ಚಿಂಗ್​ ವೇಳೆ ಪಾಕಿಸ್ತಾನ ಜಿಂದಾಬಾದ್ ಯೂಸರ್ ಐಡಿ ನೇಮ್ ತೋರಿಸಿದ್ದು, ಇದನ್ನು ಕಂಡ ಗ್ರಾಮಸ್ಥರು ಶಾಕ್ ಆಗಿದ್ದಾರೆ.

ಈ ಘಟನೆಯು ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲುಬಾಳು ಗ್ರಾಮದಲ್ಲಿ ನಡೆದಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಿ ಗೋವರ್ಧನ್ ಸಿಂಗ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಇಂಟರ್ನೆಟ್ ಸೌಲಭ್ಯ ಪಡೆಯಲು ವೈ-ಫೈ ನೆಟ್‌ವರ್ಕ್‌ಗಳನ್ನು ಪರಿಶೀಲಿಸುವಾಗ, ‘ಪಾಕಿಸ್ತಾನ ಜಿಂದಾಬಾದ್’ ಎಂಬ ವೈ-ಫೈ ಸಂಪರ್ಕ ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದೂರುದಾರರು ವೈ-ಫೈ ಬಳಕೆದಾರ ಹೆಸರನ್ನು ಸಾಕ್ಷಿಯಾಗಿ ತೋರಿಸುವ ವೀಡಿಯೊವನ್ನು ಸಹ ರೆಕಾರ್ಡ್ ಮಾಡಿದ್ದಾರೆ.

ಈ ವೈ-ಫೈ ಸಂಪರ್ಕವು ಸ್ಥಳೀಯ ಸಹಕಾರಿ ಬ್ಯಾಂಕ್‌ಗೆ ಸೇರಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ, ಆದರೆ, ಅಧಿಕಾರಿಗಳು ಇನ್ನೂ ದೃಢೀಕರಿಸಿಲ್ಲ.

ದೂರು ದಾಖಲಿಸಿಕೊಂಡಿರುವ ಪೊಲೀಸರು ಹತ್ತಿರದ ಕೆಲವು ಮನೆಗಳಿಗೆ ಭೇಟಿ ನೀಡಿದ್ದರೂ ಯಾವುದೇ ಅನುಮಾನಾಸ್ಪದವಾದ ವಸ್ತು, ಬೆಳವಣಿಗೆಗಳು ಪತ್ತೆಯಾಗಿಲ್ಲ.