ಪಲಿಮಾರು ಮಠದ 31ನೇ ವಿದ್ಯಾರಾಜೇಶ್ವರತೀರ್ಥ ಯತಿಗಳಿಗೆ ಮಾಲಿಕೆ ಮಂಗಳಾರತಿ 

ಉಡುಪಿ: ಪಲಿಮಾರು ಮಠದ 31 ನೇ ಯತಿಗಳಾಗಿ ಶ್ರೀ ವಿದ್ಯಾರಾಜೇಶ್ವರತೀರ್ಥ ಪಟ್ಟಾಭಿಷೇಕ ನಂತರ ಇಂದು ರಾಜಾಂಗಣದಲ್ಲಿ ಪರ್ಯಾಯ ಮಠದ ವತಿಯಿಂದ ಮಠಾಧೀಶರುಗಳಿಗೆ ದಿವಾನರಾದ ವೇದವ್ಯಾಸ ತಂತ್ರಿಗಳು ಮಾಲಿಕೆ ಮಂಗಳಾರತಿ ಮಾಡಿದರು.

ನಂತರ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಹಾಗೂ ಪೇಜಾವರ ಹಿರಿಯ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರಿಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರಿಪಾದರು,ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರಿಪಾದರು,ಪೇಜಾವರ ಕಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥಶ್ರೀಪಾದರು,  ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರಿಪಾದರು, ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರಿಪಾದರು, ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭತೀರ್ಥ ಶ್ರಿಪಾದರು,ಭೀಮನಕಟ್ಟೆ ಮಠಾಧೀಶರಾದ ಶ್ರೀ ರಘುವರೇಂದ್ರತೀರ್ಥ ಶ್ರಿಪಾದರು, ಅದಮಾರು ಕಿರಿಯ  ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರಿಪಾದರು ಉಪಸ್ಥಿತರಿದ್ದು ನೂತನ ಯತಿಗಳಿಗೆ ಶುಭಹಾರೈಸಿ ಆಶೀರ್ವಚನ ನೀಡಿದರು.