ಉಡುಪಿ: ಶ್ರೀ ಕ್ಷೇತ್ರ ನೀಲಾವರ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸಮೀಪವಿರುವ ಸೀತಾ ನದಿ ತಟದಲ್ಲಿರುವ ಪ್ರಸಿದ್ದ ಪಂಚಮಿಕಾನದಲ್ಲಿ ಸೋಮವಾರದಂದು ಮೊದಲ ಪಂಚಮಿ ತೀರ್ಥಸ್ನಾನ ನಡೆಯಿತು. ಶ್ರೀ ಸುಬ್ರಹ್ಮಣ್ಯ ದೇವರ ಉತ್ಸವ ಮೂರ್ತಿಯನ್ನು ಸೀತಾನದಿಯಲ್ಲಿ ಪವಿತ್ರ ಸ್ನಾನ ಮಾಡಿಸಿ ನಾಗಸನ್ನಿಧಿಯಲ್ಲಿ ಪೂಜಿಸಲಾಯಿತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ರಘುರಾಮ ಮಧ್ಯಸ್ಥ, ಅರ್ಚಕ ರಾಘವೇಂದ್ರ ಅಡಿಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸಮಿತಿಯ ಸದಸ್ಯರು, ಅರ್ಚಕರು, ಚಾಕರಿಯವರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪೂಜಾ ವಿಧಿ ವಿಧಾನದ ಬಳಿಕ ಅನ್ನಸಂತರ್ಪಣೆ ನಡೆಯಿತು. ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು.












