ಉಡುಪಿ: ಪಂಡಿತ್ ದೀನದಯಾಳ್ ಉಪಾಧ್ಯಾಯರವರು ದೇಶಕ್ಕಾಗಿ ಬದುಕಿದವರು. ಸಾಮಾನ್ಯ ಕುಟುಂಬದಲ್ಲಿ ಜನಿಸಿ ಅದೆಷ್ಟು ಬುದ್ಧಿವಂತರಾಗಿದ್ದರೂ ಯಾವುದೇ ಉದ್ಯೋಗವನ್ನು ಅರಸದೆ ತನ್ನ ಜೀವನವನ್ನು ರಾಷ್ಟ್ರಕ್ಕಾಗಿ ಸಮರ್ಪಿಸಿಕೊಂಡವರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರೇರಣೆಯನ್ನು ಪಡೆದು ಅದರ ಸೂಚನೆಯ ಮೇರೆಗೆ ಭಾರತೀಯ ಜನ ಸಂಘಕ್ಕೆ ಬಂದು ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ನಿಧನದ ನಂತರ ದೇಶಾದ್ಯಂತ ತನ್ನ ಜವಾಬ್ದಾರಿಯನ್ನು ಹೊತ್ತುಕೊಂಡು ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಕುತಂತ್ರಿಗಳ ಷಡ್ಯಂತ್ರದ ಪಿತೂರಿಗೆ ಬಲಿಯಾದರು. ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜೀವನಾದರ್ಶ, ಬಲಿದಾನ ಸದಾ ಸ್ಮರಣೀಯ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಸೇವೆ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ 105ನೇ ಜನ್ಮದಿನಾಚರಣೆಯ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಸೇವಾ ಕಾರ್ಯದ ಪ್ರಯುಕ್ತ ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ನೇತೃತ್ವದಲ್ಲಿ ಆಯೋಜಿಸಿದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಸೆ.17 ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆಯ ದಿನದಿಂದ ಅ.7ರ ವರೆಗೆ ನಡೆಯುವ ಸೇವೆ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಗರಿಷ್ಠ ಸೇವಾ ಕಾರ್ಯಗಳು ನಡೆಯುತ್ತಿರುವುದು ಪ್ರಶಂಸನೀಯ. ಪ್ರಧಾನಿ ಮೋದಿಯವರಿಗೆ ಖುಷಿ ಕೊಡುವ ಕಾರ್ಯ ಸೇವೆ. ಈ ಅಭಿಯಾನದಡಿ ಅ.2ರಂದು ಗಾಂಧಿ ಜಯಂತಿ ಆಚರಣೆಯು ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ. ರಕ್ತದಾನ ಶ್ರೇಷ್ಠ ದಾನ. ಕೊರೋನಾ ಸಂದರ್ಭದಲ್ಲಿಯೂ ಪಕ್ಷದ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ಜನತೆಯ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿರುವುದು ಅರ್ಥಪೂರ್ಣ. ರಕ್ತದಾನ ಮಾಡಿರುವ ಎಲ್ಲಾ ಕಾರ್ಯಕರ್ತರು ಮತ್ತು ವೈದ್ಯಕೀಯ ತಂಡಕ್ಕೆ ಅಭಿನಂದನೆಗಳು. ಸೇವೆ ಮತ್ತು ಸಮರ್ಪಣ ಅಭಿಯಾನದ ಎಲ್ಲಾ ಸೇವಾ ಕಾರ್ಯಗಳು ಯಶಸ್ವಿಯಾಗಲಿ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಜಿಲ್ಲಾ ವಕ್ತಾರ ಗುರು ಪ್ರಸಾದ್ ಶೆಟ್ಟಿ ಕಟಪಾಡಿ
ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಡಿಸೋಜ, ಆಸಿಫ್ ಕಟಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್ ಉದ್ಯಾವರ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಚಂದ್ರಶೇಖರ ಪ್ರಭು, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ್, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಕಾರ್ಯದರ್ಶಿ ಶ್ರೀವತ್ಸ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್(ರಿ.) ಉಡುಪಿ ಅಧ್ಯಕ್ಷ ಸತೀಶ್ ಸಾಲ್ಯಾನ್, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ರಕ್ತನಿಧಿ ವಿಭಾಗದ ಡಾ. ವಿನು ರಾಜೇಂದ್ರನ್, ನಗರಸಭಾ ಸದಸ್ಯರಾದ ರಜನಿ ಹೆಬ್ಬಾರ್, ಸಂತೋಷ್ ಜತ್ತನ್, ಗಿರಿಧರ್ ಆಚಾರ್ಯ, ಅಶೋಕ್ ನಾಯ್ಕ್, ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ಪದಾಧಿಕಾರಿಗಳಾದ ಸಂದೇಶ್, ಶರತ್ ರಾಜ್, ಕಾರ್ತಿಕ್ ಪಾಲನ್, ಯೋಗೀಶ್ ದೇವಾಡಿಗ, ಅಕ್ಷಯ್ ಬಂಗೇರ ಮುಂತಾದವರು ಉಪಸ್ಥಿತರಿದ್ದರು.