ಕಾರ್ಕಳ: ಜ.27 ರಂದು ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆ

ಕಾರ್ಕಳ: ಇಲ್ಲಿನ ಬೈಲೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪರಶುರಾಮ ಠೀಂಪಾರ್ಕ್ ಲೋಕಾರ್ಪಣೆ ಕಾರ್ಯಕ್ರಮವು ಜ.27 ರಂದು ಸಂಜೆ 4 ಗಂಟೆಗೆ ನಡೆಯಲಿದೆ.

ಜ.28 ರಂದು ಭಜನಾ ಮಂದಿರ ಉದ್ಘಾಟನೆ ನಡೆಯಲಿದ್ದು, ಪಳ್ಳಿ ಕ್ರಾಸ್ ನಿಂದ ಥೀಮ್ ಪಾರ್ಕ್ ವರೆಗೆ ಭಜನಾ ಮೆರವಣಿಗೆ ಆಯೋಜಿಸಲಾಗಿದೆ.

 

 

ಜ.27 ರಿಂದ 29 ರವೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವೈವಿಧ್ಯಮಯ ತಿಂಡಿ ತಿನಿಸುಗಳ ಆಹಾರ ಮೇಲ ಮತ್ತು ಕರಕುಶಲ ವಸ್ತು ಪ್ರದರ್ಶನವು ನಡೆಯಲಿದೆ. ಮಕ್ಕಳಿಗಾಗಿ ಅಮ್ಯೂಸ್ ಮೆಂಟ್ ಗೇಮ್ ಪಾರ್ಕ್ ಕೂಡಾ ಇರಲಿದೆ.