ಉಡುಪಿ: ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಟ್ಟುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿಎಂ ಜೋಷಿ ಹೇಳಿದ್ದಾರೆ.
ಅವರು ಭಾನುವಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ವಕೀಲರ ಸಂಘ (ರಿ.) ಮತ್ತು ನಗರಸಭೆ ಉಡುಪಿ ಅವರ ಜಂಟಿ ಆಶ್ರಯದಲ್ಲಿ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ವಚ್ಛ ಭಾರತ ಅಭಿಯಾನ ಭಾರತ ಸರ್ಕಾರದ ರಾಷ್ಟ್ರೀಯ ಸ್ವಚ್ಛತೆ ಆಂದೋಲನವಾಗಿದೆ, ಪರಿಸರ ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬ ನಾಗರೀಕರಲ್ಲೂ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದ್ದು, ಪರಿಸರವನ್ನು ಸ್ವಚ್ಛವಾಗಿಟ್ಟುಕೊಟ್ಟುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ಜಿಲ್ಲಾ ನ್ಯಾಯಾಧೀಶರು ಹೇಳಿದರು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ವಿವೇಕಾನಂದ ಪಂಡಿತ್, ಲಾವಣ್ಯ ಹೆಚ್.ಎಸ್, ಭವಾನಿ ಎಲ್ ಜೆ, , ಇರ್ಫಾನ್, ಮಂಜುನಾಥ ಎಂ.ಎಸ್, ಶೋಭಾ ಇ, ರಾಮ್ ಪ್ರಶಾಂತ್ ಎಂ.ಎನ್, ನಗರಸಭೆ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಭಾಗವಹಿಸಿದ್ದರು.