ಪರಿಷತ್ ಫೈಟ್: ಹಾಸನದಲ್ಲಿ ಜೆಡಿಎಸ್, ಬೀದರ್ ನಲ್ಲಿ ಕಾಂಗ್ರೆಸ್ ಗೆಲುವು

ಸೂರಜ್ ರೇವಣ್ಣ              ಭೀಮರಾವ್ ಪಾಟೀಲ್

ಹಾಸನ: ವಿಧಾನ ಪರಿಷತ್​​ ಚುನಾವಣೆಯಲ್ಲಿ ಮಾಜಿ ಸಚಿವ ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ 1,533 ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮೊದಲ ಬಾರಿ ಸೂರಜ್ ರೇವಣ್ಣ ವಿಧಾನ ಪರಿಷತ್ ಪ್ರವೇಶ ಮಾಡಿದ್ದಾರೆ.
ಜೆಡಿಎಸ್​ಗೆ 2,281 ಮತಗಳು ಬಂದರೆ, ಕಾಂಗ್ರೆಸ್​ಗೆ 748 ಮತಗಳು ಬಿದ್ದಿವೆ. ಇನ್ನು ಬಿಜೆಪಿಗೆ 421 ಮತಗಳು ಬಂದಿವೆ.

ಬೀದರ್ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು:

ಬೀದರ್ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಬೀದರ್ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್‌ 1,789 ಮತಗಳ ಮೂಲಕ ಜಯ ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ 1,562 ಮತಗಳನ್ನು ಪಡೆದಿದ್ದಾರೆ.