ಪರ್ಕಳ: ಸಂತೆ ಮಾರುಕಟ್ಟೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಉಡುಪಿ ನಗರಸಭಾ ವ್ಯಾಪ್ತಿಯ ಪರ್ಕಳ ವಾರ್ಡಿನ ಪರ್ಕಳ ಸಂತೆ ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ನಗರಸಭೆಯ ಉದ್ಯಮ ನಿಧಿಯಿಂದ. 3.05 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಇಂದು ಶಾಸಕ ಕೆ. ರಘುಪತಿ ಭಟ್ ಅವರು ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ನಗರ ಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು ಹಾಗೂ ನಗರ ಸಭಾ ಸದಸ್ಯರು ಉಪಸ್ಥಿತರಿದ್ದರು.