ಗಾಂಧಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಹರಿಶ್ಚಂದ್ರ ಎಮ್ ಇವರಿಗೆ ಪರ್ಯಾಯ ದರ್ಬಾರ್ ಗೌರವ

ಉಡುಪಿ: ವೈದ್ಯಕೀಯ ಸೇವೆ ಜೊತೆಗೆ ಆಧ್ಯಾತ್ಮಿಕ ಕಾರ್ಯದಲ್ಲೂ ತನ್ನನ್ನು ತೊಡಗಿಸಿಕೊಂಡಿರುವ ಉಡುಪಿಯ ಪ್ರತಿಷ್ಠಿತ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರಿಶ್ಚಂದ್ರ ಎಮ್ ಇವರನ್ನು ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ರಾಜಾಂಗಣದಲ್ಲಿ‌ ನಡೆದ ಸಂಧ್ಯಾ ದರ್ಬಾರ್ ‌ನಲ್ಲಿ ಗೌರವಪೂರ್ವಕವಾಗಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಪುತ್ತಿಗೆ ಕಿರಿಯ ಸ್ವಾಮೀಜಿ ಸುಶ್ರೀಂದ್ರ ತೀರ್ಥ ಶ್ರೀಪಾದರು, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮತ್ತಿತರರು ಉಪಸ್ಥಿತಿತರಿದ್ದರು.