ಡಿ.25ರಂದು ಮೂವರು ಸಾಧಕರಿಗೆ ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳಿಂದ ಸನ್ಮಾನ

ಉಡುಪಿ: ಸಹಕಾರ ರತ್ನ, ಶ್ರೇಷ್ಠ ಸಹಕಾರಿ ಪ್ರಶಸ್ತಿ ಪಡೆದ ಮೂವರು ಸಾಧಕರಿಗೆ ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳು ಇದೇ ಬರುವ ಡಿ.25ರಂದು ಮಧ್ಯಾಹ್ನ 2.30ಕ್ಕೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದು ತಾಲ್ಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಮಂಜುನಾಥ ಉಪಾಧ್ಯ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಹಕಾರ ಕ್ಷೇತ್ರಕ್ಕೆ ಸಲ್ಲಿಸಿದ ಸಾಧನೆಯನ್ನು ಪರಿಗಣಿಸಿ ಕೃಷ್ಣರಾಜ ಸರಳಾಯ ಹಾಗೂ ಸರಳಾ ಬಿ.ಕಾಂಚನ್‌ ಅವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಲಾಗಿದೆ. ಬಡಗುಬೆಟ್ಟು ಕೋ ಆಪರೇಟಿವ್ ಬ್ಯಾಂಕ್ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಶ್ರೇಷ್ಠ ಸಹಕಾರಿ ಪ್ರಶಸ್ತಿ ನೀಡಲಾಗಿದೆ.  ಇದು ಜಿಲ್ಲೆಗೆ ಸಿಕ್ಕ ಮೊದಲ ಗೌರವ ವಾಗಿದೆ ಎಂದು ಹೇಳಿದರು.

ಅಂದಿನ ಕಾರ್ಯಕ್ರಮದಲ್ಲಿ ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥರು, ಅದಮಾರು ಮಠದ ಕಿರಿಯ ಶ್ರೀಗಳಾದ ಈಶಪ್ರಿಯ ಸ್ವಾಮೀಜಿ, ರಾಜಕೀಯ ಮುಖಂಡರಾದ ಆಸ್ಕರ್ ಫೆರ್ನಾಂಡೀಸ್, ರಘುಪತಿ ಭಟ್, ಪ್ರಮೋದ್ ಮಧ್ವರಾಜ್, ದಕ್ಷಿಣ ಕನ್ನಡ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್‌.ರಾಜೇಂದ್ರ ಕುಮಾರ್, ಮಾಹೆ ಸಹ ಕುಲಪತಿ ಡಾ.ಎಚ್‌.ಎಸ್‌.ಬಲ್ಲಾಳ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.