ಶುಲ್ಕ ವಿನಾಯಿತಿ ಪಾವತಿ: ಆಧಾರ್ ಸೀಡ್ ಕಡ್ಡಾಯ

ಉಡುಪಿ: ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಿದ್ಯಾರ್ಥಿ ವೇತನ/ ಶುಲ್ಕ ವಿನಾಯಿತಿ ಸೌಲಭ್ಯಕ್ಕೆ 2020-21 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಹಲವಾರು ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮೊತ್ತವು ಮಂಜೂರಾಗಿರುತ್ತದೆ.

ಕೆಲವು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದಿರುವ ಕಾರಣ ಹಣ ಸಂದಾಯ ಸಾಧ್ಯವಾಗಿರುವುದಿಲ್ಲ.

ಆದ್ದರಿಂದ ಸಂಬಂಧಿಸಿದ ವಿದ್ಯಾರ್ಥಿಗಳು ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌ನಲ್ಲಿ ಐ.ಪಿ.ಪಿ.ಬಿ ಮೂಲಕ ಅಕೌಂಟ್ ತೆರೆದು ಆಧಾರ್ ಸೀಡ್ (ಎನ್.ಪಿ.ಸಿ.ಐ ಮ್ಯಾಪಿಂಗ್) ಅನ್ನು ಜನವರಿ 29 ರ ಒಳಗೆ ಮಾಡಿಸಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.