ಮುಕ್ತ ವಿವಿ ಪರೀಕ್ಷಾ ಶುಲ್ಕ ಪಾವತಿ: ಅವಧಿ ವಿಸ್ತರಣೆ

ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2001-02 ರಿಂದ 2014-15 ಹಾಗೂ 2018-19, 2019-20 ಸ್ನಾತಕ ಪದವಿ ಮತ್ತು ಎಲ್.ಎಲ್.ಎಂ, ಎಂ.ಬಿ.ಎ(ಲಾ), ಎಂ.ಟಿ.ಎಂ ಪದವಿಯ ಪುನಾರಾವರ್ತಿತ ವಿದ್ಯಾರ್ಥಿಗಳು ಹಾಗೂ 2020-21 ನೇ ಶೈಕ್ಷಣಿಕ ಸಾಲಿನಲ್ಲಿ (ಜನವರಿ ಆವೃತ್ತಿ) ಪ್ರವೇಶಾತಿ ಪಡೆದ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಗಳಾದ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್ಸಿ, ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಲಿಬ್.ಐ.ಎಸ್ಸಿ, ಎಲ್ಲಾ ಎಂ.ಎಸ್ಸಿ ಮತ್ತು ಎಲ್ಲಾ ಸ್ನಾತಕ ಹಾಗೂ ಸ್ನಾತಕೋತ್ತರ ಡಿಪ್ಲೋಮಾ, ಸರ್ಟಿಫಿಕೇಟ್ ಕಾರ್ಯಕ್ರಮಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಹಾಗೂ ಸೆಮಿಸ್ಟರ್ ಪರೀಕ್ಷೆಗಳಿಗೆ ಪರೀಕ್ಷಾ ಶುಲ್ಕವನ್ನು 200 ರೂ. ದಂಡ ಶುಲ್ಕದೊಂದಿಗೆ ಪಾವತಿಸುವ ಅವಧಿಯನ್ನು ಮಾರ್ಚ್ 30 ರ ವರೆಗೆ ವಿಸ್ತರಿಸಲಾಗಿದೆ.

ವಿಶ್ವ ವಿದ್ಯಾನಿಲಯದ ಪರೀಕ್ಷೆಗಳನ್ನು ಏಪ್ರಿಲ್ ಮೊದಲನೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್ WWW.ksoumysuru.ac.in  ಅಥವಾ ಸಹಾಯವಾಣಿ ಸಂಖ್ಯೆ: 8800335638 ಅನ್ನು ಸಂಪರ್ಕಿಸುವಂತೆ ಉಡುಪಿ ಪ್ರಾದೇಶಿಕ ಕೇಂದ್ರ ನಿರ್ದೇಶಕರ ಪ್ರಕಟಣೆ ತಿಳಿಸಿದೆ.