ಮತಾಂತರ ಮತ್ತು ಗೋಹತ್ಯಾ ನಿಷೇಧ ಕಾಯ್ದೆ ವಾಪಸ್ ಪಡೆಯುವುದು ಅತ್ಯಂತ ಕಳವಳಕಾರಿ: ಪೇಜಾವರ ಶ್ರೀ

ಉಡುಪಿ: ಹಿಂದಿನ ಸರ್ಕಾರವು ಸಮಾಜದಲ್ಲಿ ಏರ್ಪಟ್ಟಿದ್ದ ಗೊಂದಲ ಪರಿಹಾರಕ್ಕಾಗಿ ಮತಾಂತರ ನಿಷೇಧ ಕಾಯ್ದೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಪ್ರಸ್ತುತ ಸರ್ಕಾರವು ಈ ಎರಡೂ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರ ಮಾಡಿದ್ದು ಇದು ಅತ್ಯಂತ ಕಳವಳಕಾರಿ ವಿಚಾರ. ರಾಜ್ಯ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯಾ ನಿಷೇಧ ಕಾಯ್ದೆ ಹಿಂಪಡೆಯುವ ದುಸ್ಸಾಹಸ ಮಾಡಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ.

ಸರ್ಕಾರವು ಕಾನೂನು ಹಿಂಪಡೆಯುವ ದುಸ್ಸಾಹಸ ಮಾಡಬಾರದು. ಜನಾಭಿಪ್ರಾಯ ಪಡೆದು ಎರಡೂ ಕಾಯ್ದೆಗಳನ್ನು ಹಿಂಪಡೆಯದೆ ತಟಸ್ಥ ನಿಲುವು ತಾಳಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಕೂಡ ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ನಿಲುವು ಮರು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.