ಉಡುಪಿ: ಪೇಜಾವರ ಸ್ವಾಮೀಜಿಯ ನಿಧನಕ್ಕೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಸ್ವಾಮೀಜಿಯ ಅಗಲಿಕೆಯ ಸುದ್ದಿ ದುಃಖ ತಂದಿದೆ. ಹಿಂದೂ ಧರ್ಮದ ಪ್ರಮುಖ ಸ್ವಾಮಿಜಿಯಾಗಿದ್ದ ಪೇಜಾವರ ಶ್ರೀ ಅವರು ತಮ್ಮ ನಿಲುವನ್ನು ನೇರವಾಗಿ ವ್ಯಕ್ತಪಡಿಸುತ್ತಿದ್ದರು. ಅವರ ಅಗಲಿಕೆಯಿಂದಾಗಿ ಒರ್ವ ಹಿರಿಯ ಧರ್ಮದರ್ಶಿ ಕಳೆದುಕೊಂಡಂತಾಗಿದೆ ಎಂದು ಜಿಲ್ಲಾಧ್ಯಕ್ಷ ಯಾಸೀನ್ ಮಲ್ಪೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.