ಉಡುಪಿ: ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರ ಪಾರ್ಥಿವ ಶರೀರವನ್ನು ಭಾರತೀಯ ವಾಯು ಸೇನೆಯ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಕೊಂಡೊಯ್ಯಲಾಯಿತು.
ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕ ದರ್ಶನದ ಬಳಿಕ ಪಾರ್ಥಿವ ಶರೀರವನ್ನು ವಿಶೇಷ ಆ್ಯಂಬುಲೆನ್ಸ್‌ನಲ್ಲಿ ಮಧ್ಯಾಹ್ನ 1.40 ಸುಮಾರಿಗೆ ಆದಿ ಉಡುಪಿ ಹೆಲಿಪ್ಯಾಡ್‌ಗೆ ಬಿಗಿಭದ್ರತೆಯಲ್ಲಿ ತರಲಾಯಿತು.
ಅಲಂಕೃತವಾದ ಮರದ ಪೆಟ್ಟಿಗೆಯಲ್ಲಿ ಶ್ರೀಗಳ ಪಾರ್ಥಿವ ಶರೀರವನ್ನು ಇರಿಸಿ, ಬಳಿಕ ಹೆಲಿಕ್ಯಾಪ್ಟರ್‌ನಲ್ಲಿ ಸುರಕ್ಷಿತವಾಗಿ ಇಡಲಾಯಿತು.
ಇದರೊಂದಿಗೆ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಕರ. ರಘುಪತಿ ಭಟ್, ಮಠದ ದಿವಾನರು ಹಾಗೂ ಆಪ್ತರು ಬೆಂಗಳೂರಿಗೆ ತೆರಳಿದರು.
ಈ ವೇಳೆ ಡಿಸಿ ಜಗದೀಶ್, ಐಜಿಪಿ ಅರುಣ್ ಚಕ್ರವರ್ತಿ, ಎಸ್ಪಿ ನಿಶಾ ಇದ್ದರು. ಹೆಲಿಪ್ಯಾಡ್‌ನಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.