ಕಾಂಗ್ರೆಸ್‌ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆಯಿಂದಾಗಿ ರಾಜ್ಯದ ಜನತೆ ರೋಸಿಹೋಗಿದ್ದಾರೆ: ಮಾಜಿ ಶಾಸಕ ರುಕ್ಮಯ್ಯ ಪೂಜಾರಿ ಅಭಿಮತ

ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ಅತ್ಯಂತ ಮಹತ್ವಪೂರ್ಣವಾದದ್ದು, ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ಎಲ್ಲರ ಕಣ್ಮುಂದಿದ್ದು, ಮೋದಿಯವರ ಗುರಿ 400ರ ಗಡಿ ದಾಟಲಿದ್ದೇವೆ ಎಂದು ಮಾಜಿ ಶಾಸಕ ರುಕ್ಮಯ್ಯ ಪೂಜಾರಿ ಹೇಳಿದ್ದಾರೆ.

ಮೋದಿಯವರು ಪ್ರಧಾನಿಯಾದ ನಂತರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವ ಹೆಚ್ಚಾಗಿದ್ದು, ವಿಶ್ವದ ಪ್ರಬಲ ರಾಷ್ಟ್ರಗಳು ಕೂಡ ಮೋದಿಯವರ ಹೇಳಿಕೆಗಳನ್ನು ಗಮನಿಸುತ್ತಿದ್ದಾರೆ. ಕೇಂದ್ರದ ಅಭಿವೃದ್ಧಿಯಿಂದಾಗಿ ಮೋದಿಯವರ ಅಲೆ ದೇಶದಲ್ಲಿ ಕಾಣುತ್ತಿದ್ದೇವೆ, ಆದರೆ ಪ್ರಧಾನಿ ಮೋದಿಯವರ ಬಗ್ಗೆ ವಿರೋಧ ಪಕ್ಷಗಳ INDIA ಕೂಟವು ನೀಡುತ್ತಿರುವ ಅವಹೇಳನದ ಹೇಳಿಕೆಗಳು ಖಂಡನೀಯ ಎಂದರು.

ರಾಜ್ಯದ ಜನರು ಕಾಂಗ್ರೆಸ್‌ ಪಕ್ಷದ ಮೇಲೆ ವಿಶ್ವಾಸವಿಟ್ಟು ಅಧಿಕಾರಕ್ಕೆ ತಂದಿದ್ದಾರೆ, ಅಧಿಕಾರಕ್ಕೆ ಬಂದ ನಂತರ ಸಾಮರಸ್ಯದ ವಾತಾವರಣ ನಿರ್ಮಾಣ ಮಾಡಬೇಕಿತ್ತು, ಹಿಂದುಗಳ ಅವಹೇಳನ, ಕೇವಲ ಅಲ್ಪಸಂಖ್ಯಾತರ ಅತಿಯಾದ ಓಲೈಕೆ ಹೆಚ್ಚಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತವಾಗಿದ್ದು, ಕೊಲೆ-ಸುಲಿಗೆ, ದರೋಡೆ ಹೆಚ್ಚಾಗಿರುವುದನ್ನ ಕಾಣುತ್ತಿದ್ದೇವೆ. ಕರ್ನಾಟಕದಲ್ಲಿ ಬಿಜೆಪಿಯು 28ಕ್ಷೇತ್ರಗಳಲ್ಲಿ ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ಕಳೆದುಕೊಳ್ಳಬಹುದು ಎಂಬ ಅನುಮಾನ ವ್ಯಕ್ತಪಡಿಸಿದರು.

ಭಾರತೀಯ ಸೇನೆಯಲ್ಲಿ ಗಡಿಕಾಯುತ್ತಿದ್ದ ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರನ್ನು ಈ ಭಾರಿ ಬಿಜೆಪಿಯು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗಿಳಿಸಿದೆ. ದೇಶದ ಭದ್ರತೆಗೆ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಬದ್ದತೆಯ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಗೆಲುವಿಗೆ ರುಕ್ಮಯ್ಯ ಪೂಜಾರಿ ಹಾರೈಸಿದ್ದಾರೆ.