ಮಂಗಳೂರಿನ ಮೇರಿಹಿಲ್ ಪರಿಸರದಲ್ಲಿ ಭೂಮಿ ಕಂಪಿಸಿದ ಅನುಭವ

ಮಂಗಳೂರು: ಇಲ್ಲಿನ ಮೇರಿಹಿಲ್ ಪರಿಸರದಲ್ಲಿ ಬುಧವಾರ ಭೂಮಿ ಕಂಪಿಸಿದ ಅನುಭವವಾಗಿದೆ. ಬುಧವಾರ ಬೆಳಗ್ಗೆ 10.15 ರ ಸುಮಾರಿಗೆ ಮೇರಿಹಿಲ್ ಪರಿಸರದಲ್ಲಿ ಭೂಮಿ ಕಂಪಿಸಿದ ಅನುಭವಾಗಿದ್ದು, ಸಾರ್ವಜನಿಕರು ಕಟ್ಟಡಗಳಿಂದ ಹೊರಗೋಡಿ ಬಂದಿದ್ದಾರೆ. ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಶಾಲಾ ಮಕ್ಕಳನ್ನು ಹೊರಗೆ ಕಳುಹಿಸಲಾಗಿತ್ತು. ಸ್ವಲ್ಪ ಸಮಯದ ಬಳಿಕ ಪಾಠ ಪ್ರವಚನಗಳನ್ನು ಪುನರಾರಂಭಿಸಲಾಗಿದೆ ಎಂದು ವರದಿಯಾಗಿದೆ.

ಸ್ಥಳೀಯರು ಭೂಕಂಪನದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದಾಗ್ಯೂ, ಕಳೆದ 24 ಗಂಟೆಗಳಲ್ಲಿ ಮಂಗಳೂರಿನಲ್ಲಿ ಅಥವಾ ಸಮೀಪದಲ್ಲಿ ಯಾವುದೇ ಗಮನಾರ್ಹ ಭೂಕಂಪಗಳು ಸಂಭವಿಸಿಲ್ಲ. ಹಾಗಿದ್ದರೂ ಭೂಮಿ ಕಂಪಿಸಿದ ಅನುಭವಕ್ಕೆ ನಿಖರವಾದ ಕಾರಣಗಳೇನೆಂದು ತಿಳಿದುಬಂದಿಲ್ಲ.