ಬಿಜೆಪಿ ನಾಯಕ ಸೋಮಶೇಖರ್ ಭಟ್ ಅವರಿಗೆ ಅಂತಿಮ ವಿದಾಯ ಸಲ್ಲಿಸಿದ ಗಣ್ಯರು

ಉಡುಪಿ: ಹಿರಿಯ ಬಿಜೆಪಿ ನಾಯಕ ಸೋಮಶೇಖರ್ ಭಟ್ ಅವರ ಅಂತ್ಯ ಸಂಸ್ಕಾರವನ್ನು ಸೋಮವಾರ ಬೀಡಿನಗುಡ್ಡೆ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು.

ಬೆಳಗ್ಗೆ ಕಾಡುಬೆಟ್ಟುವಿನಲ್ಲಿರುವ ಭಟ್ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಯಿತು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕ ದಾ.ಮ. ರವೀಂದ್ರ, ಮಾನ್ಯ ವಿಭಾಗ ಸಂಘ ಚಾಲಕ ನಾರಾಯಣ ಶೆಣೈ ಸಹಿತ ಸಂಘ ಪ್ರಮುಖರು, ಮಾಜಿ ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್. ಮೆಂಡನ್, ಭಜರಂಗದಳದ ಪ್ರಮುಖರಾದ ಸುನಿಲ್ ಕೆ.ಆರ್., ದಿನೇಶ್ ಮೆಂಡನ್, ಆರೆಸ್ಸೆಸ್ ಹಿರಿಯ ಪ್ರಚಾರಕ ದ.ಮಾ.ರವೀಂದ್ರ, ಪ್ರಾಂತ ಸಹ ಕಾರ್ಯವಾಹ ಪಿ.ಎಸ್.ಪ್ರಕಾಶ್, ವಿಭಾಗ ಸಂಘಚಾಲಕ್ ಡಾ. ನಾರಾಯಣ ಶೆಣೈ, ವಿಭಾಗ ಕಾರ್ಯವಾಹ ವಾದಿರಾಜ್, ಮಣಿಪಾಲ ಮೀಡಿಯಾ ನೆಟ್‌ವರ್ಕ್ ಲಿಮಿಟೆಡ್‌ನ ಕಾರ್ಯಾಧ್ಯಕ್ಷ ಟಿ ಸತೀಶ್ ಪೈ, ತರಂಗ ವಾರಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ ಸಂಧ್ಯಾ ಎಸ್ ಪೈ ಸಹಿತ ಬಿಜೆಪಿ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಹಿತೈಷಿ-ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಿದರು.