ಪೆರ್ಡೂರು: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸಭೆಯು ಆ.1 ರಂದು ದೇವಸ್ಥಾನದ ವಠಾರದಲ್ಲಿ ಜರುಗಿತು.
ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಲಾಲಾಜಿ ಆರ್ ಮೆಂಡನ್, ವ್ಯವಸ್ಥಾಪನಾ ಸಮಿತಿಯ ಸದಸ್ಯ ಜಿಯಾನಂದ ಹೆಗ್ಡೆ, ಡಾ. ವಿದ್ಯಾಧರ ಶೆಟ್ಟಿ, ಜಯ ಪೂಜಾರಿ, ಶಂಕರ ನಾಯ್ಕ, ನಾಗಲಕ್ಷ್ಮಿ ನಾಯ್ಕ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರಾಜಗೋಪಾಲ್ ಉಪಾಧ್ಯಾಯ, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ದೇವು ಪೂಜಾರಿ ಹಾಗೂ ಜೀರ್ಣೋದ್ದಾರ ಸಮಿತಿ ಸದಸ್ಯರು ಮತ್ತು ಪ್ರಮುಖರು ಸ್ಥಳೀಯರು ಉಪಸ್ಥಿತರಿದ್ದರು.