ಉಡುಪಿ: ಇಲ್ಲಿನ ಪಕ್ಕಾಲು ಪೆರ್ಡೂರು ಗ್ರಾಮದ ಜಯಲಕ್ಷ್ಮೀ ಮನೆ ನಿವಾಸಿ ನಾಗರಾಜ ಆಚಾರ್ಯ (30) ಎಂಬವರು ಆಗಸ್ಟ್ 11 ರಂದು ಬೆಳಿಗ್ಗೆ 8.30ಕ್ಕೆ ಮನೆಯಿಂದ ತೆರಳಿದವರು ಮತ್ತೆ ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ.
5.6 ಅಡಿ ಎತ್ತರ, ಗೋದಿ ಮೈ ಬಣ್ಣ, ಸಾಧಾರಣ ಮೈ ಕಟ್ಟು ಹೊಂದಿರುವ ಇವರು, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪೊಲೀಸ್ ಉಪನಿರೀಕ್ಷಕರು, ಹಿರಿಯಡ್ಕ ಪೊಲೀಸ್ ಠಾಣೆ ಇವರಿಗೆ ಮಾಹಿತಿ ನೀಡುವಂತೆ ಹಿರಿಯಡ್ಕ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.