ಕುಂದಾಪುರ: ಕಮಲಶಿಲೆ ದೇಗುಲಕ್ಕೆ ತೆರಳಿದ್ದ ವ್ಯಕ್ತಿ ಆಕಸ್ಮಿಕವಾಗಿ ನದಿಗೆ ಬಿದ್ದು ಸಾವು

ಕುಂದಾಪುರ: ಇಲ್ಲಿನ ಬಹು ಪ್ರಖ್ಯಾತ ಕಮಲಶಿಲೆ ದೇವಸ್ಥಾನಕ್ಕೆ ಪೂಜೆಗೆಂದು ಹೊರಟ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜು.5ರಂದು ನಡೆದಿದೆ.

ಮೃತರನ್ನು ಶೇಷಾದ್ರಿ ಐತಾಳ್ ಎಂದು ಗುರುತಿಸಲಾಗಿದೆ. ಇವರು ಜು. ೫ ರಂದು ಕಮಲ ಶಿಲೆ ದೇವಳಕ್ಕೆ ಪೂಜೆಗೆಂದು ಆಗಮಿಸಿದ್ದರು. ಈ ವೇಳೆ ಕಮಲಶಿಲೆ ದೇವಾಲಯದ ಪಕ್ಕದಲ್ಲಿ ಹರಿಯುವ ಕುಬ್ಜಾ ನದಿಗೆ ಇಳಿದ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ನದಿಗೆ ಬಿದ್ದ ಜಾಗದ ಸುಮಾರು ನೂರು ಮೀಟರ್ ದೂರಲ್ಲಿ ಶವ ಪತ್ತೆಯಾಗಿದ್ದು, ಮುಳುಗು ತಜ್ಞ ಮಂಜುನಾಥ್ ನಾಯಕ್ ತಂಡ ಶವವನ್ನು ಮೇಲೆತ್ತಿದೆ.

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.