ಸತತ ನಾಲ್ಕನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ದೇಶದಾದ್ಯಂತ ಸತತ ನಾಲ್ಕನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಂಡಿದ್ದು, ಗರಿಷ್ಠ ಮಟ್ಟ ತಲುಪಿವೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ 30 ಪೈಸೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್‌ಗೆ ₹103.54 ಆಗಿದೆ. ಡೀಸೆಲ್ ಬೆಲೆ 35 ಪೈಸೆ ಹೆಚ್ಚಳವಾಗಿ ಪ್ರತಿ ಲೀಟರ್‌ಗೆ ₹92.12 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ₹109.54 ಕ್ಕೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ₹99.92 ರಷ್ಟಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹107.14 ಮತ್ತು ಡೀಸೆಲ್ ಬೆಲೆ ₹97.77ಕ್ಕೆ ಏರಿದೆ.