ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ನಿಲ್ಲುವಂತೆ ಕಾಣುತ್ತಿಲ್ಲ. ಸತತವಾಗಿ ನಾಲ್ಕನೇ ದಿನವೂ ದಾಖಲೆ ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿದ್ದು, ಇದರಿಂದ ಜನಸಾಮಾನ್ಯರ ಮೇಲೆ ಮತ್ತಷ್ಟು ಹೊರೆ ಬೀಳಲಿದೆ.
ರಾಜ್ಯದ ತೈಲ ರಿಟೈಲರ್ಸ್ ಗಳ ಪ್ರಕಾರ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 31 ಪೈಸೆ ಹಾಗೂ ಡೀಸೆಲ್ ದರದಲ್ಲಿ 35 ಪೈಸೆ ಹೆಚ್ಚಳವಾಗಿದೆ.
ಇದರೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಾರ್ವಕಾಲಿಕ ದಾಖಲೆ ಎಂಬಂತೆ ಲೀಟರ್ ಪೆಟ್ರೋಲ್ ದರ 88.14 ಪೈಸೆಯಾದರೆ, ಮುಂಬೈಯಲ್ಲಿ 94. 64 ಪೈಸೆಯಾಗಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ದರ 78.38 ಪೈಸೆಯಷ್ಟಿದ್ದು, ಮುಂಬೈಯಲ್ಲಿ 85. 35 ಪೈಸೆಗೆ ಹೆಚ್ಚಳವಾಗಿದೆ.
ನಾಲ್ಕು ದಿನಗಳಲ್ಲಿ ಲೀಟರ್ ಪೆಟ್ರೋಲ್ 1 ರೂ. 21 ಪೈಸೆ ಮತ್ತು ಲೀಟರ್ ಡೀಸೆಲ್ 1.25 ಪೈಸೆಯಷ್ಟು ಏರಿಕೆಯಾಗಿದೆ. ದರ ತಗ್ಗಿಸಲು ಅಬಕಾರಿ ಸುಂಕವನ್ನು ಇಳಿಕೆ ಮಾಡುವುದನ್ನು ಸರ್ಕಾರ ಪರಿಗಣಿಸಿಲ್ಲ ಎಂದು ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಸಂಸತ್ತಿನಲ್ಲಿ ತಿಳಿಸಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಗೆ 61 ಅಮೆರಿಕನ್ ಡಾಲರ್ ಗೆ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ