ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬಾರಿ ಏರಿಕೆ ಕಂಡಿದ್ದು, ಮಾ. 22ರ ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ 80 ಪೈಸೆ ಹೆಚ್ಚಳವಾಗಿದೆ.

ಇದೀಗ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್‍ಗೆ 101.42 ರೂ. ಮತ್ತು ಡೀಸೆಲ್‍ಗೆ 85.80 ರೂ. ಹೆಚ್ಚಳವಾಗಿದೆ.

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.21ರೂ., ಪ್ರತಿ ಲೀಟರ್ ಡೀಸೆಲ್‍ಗೆ 87.47ರೂ., ಮುಂಬೈನಲ್ಲಿ ಲೀಟರ್ ಪೆಟ್ರೋಲ್ 110.78ರೂ., ಡೀಸೆಲ್ 94.94ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್ 102.16 ರೂ. ಮತ್ತು ಡೀಸೆಲ್ 90.62 ರೂ., ಚೆನ್ನೈನಲ್ಲಿ ಪೆಟ್ರೋಲ್ ದರ 102.16 ರೂ., ಡೀಸೆಲ್ ದರ 92.19 ರೂಪಾಯಿಗೆ ಏರಿಕೆಯಾಗಿದೆ.