ತಮಿಳಿನಾಡಿನಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭ: ಮತದಾನ ಮಾಡಿದ ಸ್ಟಾಲಿನ್, ಅಣ್ಣಾಮಲೈ, ರಜನಿಕಾಂತ್

ಚೆನ್ನೈ: ಏಳು ಹಂತದ ಲೋಕಸಭೆ ಚುನಾವಣೆಯ(Loksabha Elections) ಮೊದಲ ಹಂತದ ಮತದಾನದಲ್ಲಿ ತಮಿಳುನಾಡಿನ ಎಲ್ಲಾ 39 ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆಯುತ್ತಿದೆ.

ತಮಿಳುನಾಡಿನಲ್ಲಿ ಪ್ರಮುಖ ಅಭ್ಯರ್ಥಿಗಳಾದ ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಕೊಯಮತ್ತೂರಿನಿಂದ ಡಿಎಂಕೆ ನಾಯಕ ಗಣಪತಿ ಪಿ ರಾಜ್‌ಕುಮಾರ್ ಮತ್ತು ಎಐಎಡಿಎಂಕೆಯ ಸಿಂಗೈ ರಾಮಚಂದ್ರನ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಚೆನ್ನೈ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ತಮಿಳಿಸೈ ಸೌಂದರರಾಜನ್ ಅವರು ಡಿಎಂಕೆಯ ತಮಿಳಚಿ ತಂಗಪಾಂಡಿಯನ್ ಮತ್ತು ಎಐಎಡಿಎಂಕೆಯ ಜೆ ಜಯವರ್ಧನ್ ಅವರನ್ನು ಎದುರಿಸಲಿದ್ದಾರೆ.

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಕೊಯಮತ್ತೂರು ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ, ಡಿಎಂಕೆ ನಾಯಕಿ ಕನಿಮೊಳಿ, ಮಾಜಿ ಸಿಎಂ ಪನ್ನೀರ್ ಸೆಲ್ವಂ, ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ಪುದುಚೇರಿ ಸಿಎಂ ಎನ್ ರಂಗಸಾಮಿ ಮುಂತಾದವರು ಮತದಾನ ಮಾಡಿದರು.