ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನನ್ನ ಪೋಟೊ ದುರ್ಬಳಕೆ ಮಾಡುತ್ತಿದ್ದಾರೆಂದು ಹೇಳಿ ಹಾಸ್ಯ ನಟ ಸಾಧುಕೋಕಿಲ ಅವರು ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಅನಗತ್ಯವಾಗಿ ನನ್ನ ಪೋಟೋ ಅಪ್ ಲೋಡ್ ಮಾಡಿ ದುರ್ಬಳಕೆ ಮಾಡಲಾಗುತ್ತಿದೆ. ಇದರಿಂದ ನನ್ನ ಗೌರವಕ್ಕೆ ಧಕ್ಕೆಯಾಗುತ್ತಿದೆ. ಹಾಗಾಗಿ ತಪ್ಪಿತಸ್ಥ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಾಧು ಕೋಕಿಲ ದೂರಿನಲ್ಲಿ ತಿಳಿಸಿದ್ದಾರೆ.