ಆರೋಗ್ಯ ವೃದ್ಧಿಗೆ ದೈಹಿಕ ಅರಿವು ಮುಖ್ಯ: ಬಸ್ರೂರು ರಾಜೀವ ಶೆಟ್ಟಿ

ಉಡುಪಿ: ಮನುಷ್ಯನಿಗೆ ಇಂದು ಸಾಕಷ್ಟು ಸವಲತ್ತುಗಳು ಇರುವುದು ದೈಹಿಕ ಆರೋಗ್ಯದ ಮೇಲೆ ಪರಿಣಾjಮ ಬೀರಿದೆ. ಪ್ರತಿಯೊಬ್ಬರೂ ದೇಹದ ಅಂಗಾoಗಗಳ ರಚನೆ ಮತ್ತು ಕಾರ್ಯನಿರ್ವಹಣೆಯ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯವಾಗಿದೆ.

ಈ ದೃಷ್ಟಿಯಿಂದ ಆರೋಗ್ಯ ಮಾಹಿತಿ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು.

ಅವರು ಕುಂಜಿಬೆಟ್ಟಿನ ಓಕುಡೆ ii, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್‌ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ಫ್ಯಾಟಿ ಲಿವರ್ – ನೇತ್ರ ತಪಾಸಣೆ ಮತ್ತು ಮಾಹಿತಿ ಶಿಬಿರವನ್ನು ಉದ್ಗಾಟಿಸಿ ಮಾತಾನಾಡುತ್ತಿದ್ದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ರೆಡ್‌ಕ್ರಾಸ್ ಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ ಫ್ಯಾಟಿ ಲಿವರ್ ಸಮಸ್ಯೆಗಳ ಬಗ್ಗೆ ವಿವರಣೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಡಾ. ಅಭಿನಯ್ ಕಣ್ಣಿನ ಆರೋಗ್ಯದ ಕುರಿತು ಹಾಗೂ ಕೃಷಿ ತಜ್ಞ ಮುರಳೀಧರ್ ಭಟ್ ಆರೋಗ್ಯ ಮತ್ತು ಪ್ರಕೃತಿ ನಡುವಿನ ಸಂಬoಧದ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ii ರಾಮಚಂದ್ರ ಪಾಟ್ಕರ್, ಕಾರ್ಯದರ್ಶಿ ಜೀವನ್ ಶೆಟ್ಟಿ, ವಿಠ್ಠಲ್ ಕಾಂಚನ್ ಉಪಸ್ಥಿತರಿದ್ದರು. ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ನಿರೂಪಿಸಿ, ಲಯನ್ಸ್ ಖಜಾಂಚಿ ಸುಬ್ರಹ್ಮಣ್ಯ ಶೇರಿಗಾರ್ ವಂದಿಸಿದರು.