ಪಿರಾನಾ ಹಂಟರ್ಸ್ ತೆಕ್ಕೆಗೆ ಸಿಪಿಎಲ್ 2023 ಕ್ರಿಕೆಟ್ ಟ್ರೋಫಿ

ಮಂಗಳೂರು: ಮಂಗಳೂರಿನ ಉರ್ವಾ ಮುನ್ಸಿಪಲ್ ಕ್ರೀಡಾಂಗಣದಲ್ಲಿ ನವಂಬರ್ 11 ಮತ್ತು 12 ರಂದು ಮಂಗಳೂರು ಪ್ರಾಂತ್ಯದ ಕಥೊಲಿಕ್ ಕ್ರಿಶ್ಚಿಯನ್ನರ ಕ್ರಿಕೆಟ್ ಕ್ರೀಡಾಕೂಟವು ನಡೆಯಿತು.

ಮೊದಲನೆ ದಿನ ವಂದನೀಯ ಬೆಂಜಮಿನ್ ಪಿಂಟೋ ಆಶೀರ್ವಚಿಸಿ ಎಲ್ಲಾ ಆಟಗಾರರಿಗೆ ಶುಭ ಹಾರೈಸಿದರು.

ಮುಖ್ಯ ಅಥಿತಿಗಳಾದ ಶಾಸಕ ಉಮಾನಾಥ ಕೋಟ್ಯಾನ್ ಮಾತಾನಾಡಿ, ಇಂತಹ ಪಂದ್ಯಾಟದಿಂದ ಆಟಗಾರರ ದೈಹಿಕ, ಮಾನಸಿಕ ಸಾಮರ್ಥ್ಯವು ವೃದ್ಧಿಯಾಗಿ ಸಮಾಜದಲ್ಲಿ ಅನ್ಯೋನ್ಯತೆಯಿಂದ ಬಾಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಸಂಪತ್ ಶೆಟ್ಟಿ, ಸಿಎ ಕೊಲಿನ್ ರೊಡ್ರಿಗಸ್, ಫ್ರಾನ್ಸಿಸ್ ಡಿಸೋಜ ಅಥಿತಿಗಳಾಗಿ ಆಗಮಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷ ರೋಹನ್ ಮೊಂತೇರೋ ಮಾತನಾಡಿ ಸಮಾಜಕ್ಕೆ ನಮ್ಮ ಸಹಕಾರ ಸದಾ ಇರುತ್ತದೆ. ಅದರಲ್ಲೂ ಯುವ ಜನತೆ ಒಟ್ಟುಗೂಡಿ ನಡೆಸುವ ಇಂತಹ ಪಂದ್ಯಾಟಗಳಿಗೆ ತನ್ನ ಕೈಲಾದ ಸಹಾಯವನ್ನು ನೀಡುವ ಭರವಸೆ ನೀಡಿದರು.

ಕಥೊಲಿಕ್ ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷ ವಿನೋದ್ ಪಿಂಟೋ ತಾಕೋಡೆ ಸ್ವಾಗತಿಸಿ, ಜೇಸನ್ ಪಿರೇರಾ ಶಿರ್ತಾಡಿ ಕಾರ್ಯಕ್ರಮ ನಿರೂಪಿಸಿದರು.

ಎರಡನೇ ದಿನ ಸಂಜೆ ೬ರ ತನಕ ನಡೆದ ಪಂದ್ಯಾಟದಲ್ಲಿ ವಿಜೇತರಾಗಿ ಜೋನ್ ನೋರ್ಬಟ್ ಮಾಲಕತ್ವದ ಪಿರಾನಾ ಹಂಟರ್ಸ್ ತಂಡವು ಹೊರಹೊಮ್ಮಿತು, ಪ್ರವೀಣ್ ಸಿಕ್ವೇರಾ ಮಾಲಕತ್ವದ ಪ್ರಜ್ವಲ್ ಗ್ಲ್ಯಾಡಿಯೇಟರ್ಸ್ ತಂಡವು ರನ್ನರ್ಸ್ ಅಪ್ ಆಗಿ ಹೊಮ್ಮಿತು.

ಮೊದಲ ಹಾಗೂ ದ್ವಿತೀಯ ರನ್ನರ್ಸ್ ಕ್ರಮವಾಗಿ ರಿಚರ್ಡ್ ಡಿಸೋಜ ಮಾಲಕತ್ವದ ನೈಟ್ ವಾರಿಯರ್ಸ್ ಹಾಗೂ ಜೊನ್ ಲ್ಯಾನ್ಸಿ ಮಾಲಕತ್ವದ ಲೈಟನ್ ಶಿಪಿಂಗ್ ತಂಡಗಳು ಆಯ್ಕೆಯಾದವು.

ಕ್ರಿಕೆಟ್ ಪಂದ್ಯಾಟದ ಸಮಾರೋಪ ಕಾರ್ಯಕ್ರಮ ಜೋಯ್ಲಸ್ ಡಿಸೋಜ ಅಧಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿವಂದನೀಯ ರೋಬರ್ಟ್ ಡಿಸೋಜ ಮಾತನಾಡಿ, ಎಲ್ಲಾ ಕ್ರಿಶ್ಚಿಯನ್ ಆಟಗಾರರನ್ನು ಒಟ್ಟುಗೂಡಿಸಿ ಇಂತಹ ಪಂದ್ಯಾಟ ನಡೆಸುವುದು ಅಭಿನಂದನೀಯ. ವಿನೋದ್ ಹಾಗೂ ಸಿಪಿಎಲ್ ಅಸೋಸಿಯೇಷನ್ ಉತ್ತಮ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಇಂತಹ ಕ್ರಿಕೆಟ್ ಪಂದ್ಯಾಟವು ಇನ್ನಷ್ಟು ವಿಜ್ರಂಭಣೆಯಿಂದ ನಡೆಯಲಿ ಎಂದು ಅಶೀರ್ವದಿಸಿದರು.

ಟೈಟಸ್ ನೊರೊನ್ಹಾ, ಎಚ್ಚೆಮ್ ಫೆರ್ನಾಲ್, ರೋಶನ್ ಮಾಡ್ತಾ ಮುಖ್ಯ ಅಥಿತಿಗಳಾಗಿದ್ದು ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿದರು.

ವೈಯುಕ್ತಿಕ ಪ್ರಶಸ್ತಿ ಗೆದ್ದ ಆಟಗಾರರ ವಿವರಗಳು:

  1. ಫೈನಲ್ ಮ್ಯಾನ್ ಆಫ್ ದಿ ಮ್ಯಾಚ್ ಸಚಿನ್ ಪಿರಾನಾ ಹಂಟರ್ಸ್
  2. ಮ್ಯಾನ್ ಆಫ್ ದಿ ಸೀರೀಸ್ ನಿಥಿನ್ ಪ್ರಜ್ವಲ್ ಗ್ಲಾಡಿಯೇಟರ್ಸ್
  3. ಬೆಸ್ಟ್ ಬ್ಯಾಟ್ಸಮನ್ ಸಂಜಯ್ ಫಿರಾನಾ ಹಂಟರ್ಸ್
  4. ಬೆಸ್ಟ್ ಬೌಲರ್ ಕೆವಿನ್ ಪಿರಾನಾ ಹಂಟರ್ಸ್
  5. ಬೆಸ್ಟ್ ಫಿಲ್ಡರ್ ರಾಕೇಶ್ ಪಿರಾನಾ ಹಂಟರ್ಸ್
  6. ಬೆಸ್ಟ್ ಕ್ಯಾಚ್ ಆಫ್ ದ ಟೂರ್ನಾಮೆಂಟ್ ಪ್ರಿತೇಶ್ ಪ್ರಜ್ವಲ್ ಗ್ಲ್ಯಾಡಿಯೇಟರ್ಸ್
  7. ಬೆಸ್ಟ್ ಕೀಪರ್ ಸುನಿಲ್ ಪ್ರಜ್ವಲ್ ಗ್ಲ್ಯಾಡಿಯೇಟರ್ಸ್
  8. ಬೆಸ್ಟ್ ಸೀನಿಯರ್ ಪ್ಲೇಯರ್ ಆರುಣ್ ಡಿಸೋಜಾ ಪಿರಾನಾ ಹಂಟರ್ಸ್
  9. ಬೆಸ್ಟ್ ಜೂನಿಯರ್ ಪ್ಲೇಯರ್ ಡಿಯೋನ್ ಲೈಟನ್ ಶಿಪ್ಪಿಂಗ್ ಏಬಿ
  10. ಆರೆಂಜ್ ಕ್ಯಾಪ್ ಸಂಜಯ್ ಪಿರಾನಾ ಹಂಟರ್ಸ್
  11. 11. ಪರ್ಪಲ್ ಕ್ಯಾಪ್ ಕೆವಿನ್ ಪಿರಾನಾ ಹಂಟರ್ಸ್
    12. ಲೀಗ್ ನ ಎಲ್ಲಾ ಪಂದ್ಯಾಟಗಳಿಗೂ ಮ್ಯಾನ್ ಆಫ್ ದಿ ಮ್ಯಾಚ್ ನೀಡಿ ಗೌರವಿಸಲಾಯಿತು.

ದಿ ವೇಕೆಂಟ್ ಹೌಸ್ ಚಲನಚಿತ್ರ ನಿರ್ಮಾಪಕಿ ನಟಿ ಎಸ್ತೆರ್ ನೊರೊನ್ಹಾ, ವೊಡ್ತಾಂತ್ಲೆ ಫುಲ್ ಖ್ಯಾತಿಯ ನಟ ಆಸ್ಕರ್ ಪೆರ್ನಾಂಡಿಸ್ ಕ್ರಿಕೆಟ್ ಪಂದ್ಯಾಟ ವೀಕ್ಷಿಸಲು ಆಗಮಿಸಿದ್ದು, ಎಲ್ಲಾ ಕ್ರಿಕೆಟ್ ಆಟಗಾರರಿಗೆ ಶುಭಹಾರೈಸಿದರು.

ಸಿಪಿಎಲ್ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.