ಗಂಗಾವತಿ (ಕೊಪ್ಪಳ) :ರೈತರೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಅಧಿಕಾರಿ, ಹೊಲದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದರು. ಇದಕ್ಕೂ ಮೊದಲು ಹೊಸಕೇರಿ ಗ್ರಾಮದ ಬೀಜ ಸಂಸ್ಕರಣಾ ಕೇಂದ್ರ, ಕೋಟಯ್ಯ ಕ್ಯಾಂಪಿನ ಅನ್ನಪೂರ್ಣ ಮಹಿಳಾ ಸಂಘದ ಕಿರು ಆಹಾರ ಉತ್ಪಾದನಾ ಘಟಕ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ರೈತ ಶೇಷಗಿರಿ ಅವರ ಹೊಲಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಗದ್ದೆಗಿಳಿದು ಸಸಿ ನಾಟಿ ಮಾಡಿದ್ದ ವಿದ್ಯಾರ್ಥಿಗಳು : ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಶಾಲೆಯೊಂದರಲ್ಲಿ ಮಕ್ಕಳನ್ನು ಗದ್ದೆಗಿಳಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸುವ ಮೂಲಕ ವಿಭಿನ್ನವಾಗಿ ಪಾಠ (ಜುಲೈ 21-2023) ಮಾಡಲಾಗಿತ್ತು. ತೆಂಕಣಕೇರಿ ಗ್ರಾಮದ ಆದರ್ಶ ಪ್ರೌಢಶಾಲೆಯ ಮಕ್ಕಳಿಗೆ ಗದ್ದೆ ಎಂದರೇನು?, ಬೇಸಾಯ ಹೇಗಿರುತ್ತದೆ?, ನಾಟಿ ಹೇಗೆ ಮಾಡಬೇಕು ಎಂಬ ಮಾಹಿತಿ ನೀಡುತ್ತಾ ಮಕ್ಕಳನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಲಾಗಿತ್ತು. ಮಕ್ಕಳು ಮಳೆ ಲೆಕ್ಕಿಸದೇ ಉತ್ಸಾಹದಲ್ಲಿ ಪಾಲ್ಗೊಂಡಿದ್ದರು.
‘ರೈತರೊಂದಿಗೆ ಒಂದು ದಿನ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿರುವ ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ರಾಹುಲ್ ರತ್ನಂ ಪಾಂಡೆ ಅವರಿಂದು ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ತಾಲೂಕಿನ ಮರಳಿ ಹೋಬಳಿಯ ಕೋಟಯ್ಯ ಕ್ಯಾಂಪಿನಲ್ಲಿ ರೈತರೊಂದಿಗೆ ಭತ್ತದ ಗದ್ದೆಗಿಳಿದು, ಸಸಿಗಳನ್ನು ನಾಟಿ ಮಾಡಿದರು.ಕೊಪ್ಪಳ ಜಿಲ್ಲಾ ಪಂಚಾಯಿತಿ ಸಿಇಒ ರೈತರೊಂದಿಗೆ ಭತ್ತದ ಸಸಿಗಳನ್ನು ನಾಟಿ ಮಾಡಿ ಗಮನ ಸೆಳೆದರು.ಈ ಸಂದರ್ಭದಲ್ಲಿ ಅವರು ಬಿಳಿ ಪಂಚೆ, ಟಿ ಶರ್ಟ್ ಧರಿಸಿದ್ದರು. ಬಳಿಕ ಹೊಲದಲ್ಲೇ ಕುಳಿತು ಮಧ್ಯಾಹ್ನದ ಭೋಜನ ಸವಿದರು