ಉಡುಪಿ, ಮೇ 30: ಮೈಸೂರಿನ ಕೇಂದ್ರೀಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ) ಸಂಸ್ಥೆಯು ಭಾರತ ಸರ್ಕಾರದ ರಸಾಯನ, ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ.
2019-20 ನೇ ಸಾಲಿನ 2 ನೇ ವರ್ಷದ ಡಿಪ್ಲೋಮಾ ಕೋರ್ಸ್ಗೆ ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನ. ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ-2 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ-2 ವರ್ಷದ ಕೋರ್ಸ್ಗಳಿಗೆ ಪಿ.ಯು.ಸಿ(ವಿಜ್ಞಾನ) ಪರೀಕ್ಷೆಯಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕ ಮತ್ತು ಮುಖ್ಯಸ್ಥ ಆರ್.ಟಿ.ನಾಗರಳ್ಳಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0821-2510618 / 9480253024 /9632688884 ಅನ್ನು ಸಂಪರ್ಕಿಸುವಂತೆ ಸಿಪೆಟ್ನ ಪ್ರಕಟಣೆ ತಿಳಿಸಿದೆ.