ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಭಾರತೀಯ ಜನತಾ ಪಕ್ಷವು ತೀವ್ರಗೊಳಿಸಿದ್ದು, ಮುಂದಿನ ಎರಡು ವಾರಗಳಲ್ಲಿ ಹಲವಾರು ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಮಂಡ್ಯ ಮತ್ತು ವಿಜಯಪುರದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.
ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್ ಪ್ರವೇಶ ಮಾಡಲಿದ್ದಾರೆ. ಒಕ್ಕಲಿಗರಲ್ಲಿ ಹಲವರು ತಮ್ಮದು ನಾಥ ಪಂಥಕ್ಕೆ ಸೇರಿದ ಮಠವೆಂದು ನಂಬುತ್ತಾರೆ. ಈ ಕಾರಣದಿಂದ ಒಕ್ಕಲಿಗರು ಯೋಗಿ ಆದಿತ್ಯನಾಥ್ ಅವರ ಬಹ್ಹೆ ಹೆಚ್ಚು ಒಲವು ಹೊಂದಿದ್ದಾರೆ ಎನ್ನಲಾಗಿದೆ.
ಅತ್ತ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಕೂಡ ಬುಧವಾರ ಬಿಜೆಪಿ ಪರ ರೋಡ್ ಶೋ ನಡೆಸಿದ್ದಾರೆ.
ಏತನ್ಮಧ್ಯೆ, ಮೂರು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ. ಏಪ್ರಿಲ್ 25 ರಂದು ಬಾಗಲಕೋಟೆ ಜಿಲ್ಲೆಯ ತೇರದಾಳ, ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಮತ್ತು ಯಾದಗಿರಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿಮಾತನಾಡಿದ್ದಾರೆ. ಅಲ್ಲದೆ, ಯಾದಗಿರಿಯಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಏ.27 ರಂದು ಕರಾವಳಿಯ ಕಾಪು ಜಿಲ್ಲೆಗೂ ಆಗಮಿಸಲಿದ್ದಾರೆ.
ಮತ್ತೊಂದೆಡೆ, ಸೋಮವಾರದಿಂದ ಮೂರು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿರುವ ಬಿಜೆಪಿ ಅಧ್ಯಕ್ಷ ಜೆ.ಪಿ.ನಡಾ ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟದಲ್ಲಿ ರೋಡ್ ಶೋನಲ್ಲಿ ಪಾಲ್ಗೊಂಡರು.
ಏಪ್ರಿಲ್ 29 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡುವುದರೊಂದಿಗೆ ಪಕ್ಷದ ಮೆಗಾ ಚುನಾವಣಾ ಪ್ರಚಾರಕ್ಕೆ ಉತ್ತೇಜನ ಸಿಗುವ ಸಾಧ್ಯತೆಯಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಪ್ರಧಾನಿ ಮೋದಿ ಬೆಳಗಾವಿಯಿಂದ ಪ್ರಚಾರ ಆರಂಭಿಸಲಿದ್ದಾರೆ. ಅವರು ಕರ್ನಾಟಕದ ದೊಡ್ಡ ಜಿಲ್ಲೆಗಳಲ್ಲಿ ಒಂದಾದ ಬೆಳಗಾವಿಯ ಚಿಕ್ಕೋಡಿ, ಕಿತ್ತೂರು ಮತ್ತು ಕುಡಚಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿಯವರು ಉತ್ತರ ಕನ್ನಡ ಜಿಲ್ಲೆಗೂ ಭೇಟಿ ನೀಡಲಿದ್ದಾರೆ. ಮೇ 3 ರಂದು ಮತ್ತೆ ಭೇಟಿ ನೀಡಲಿದ್ದಾರೆ ಎಂದರು.
ಬಿಜೆಪಿ ಮೂಲಗಳ ಪ್ರಕಾರ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏಪ್ರಿಲ್ 26 ಮತ್ತು 29 ಮತ್ತು ಮೇ 5 ಮತ್ತು 7 ರಂದು ನಾಲ್ಕು ಚುನಾವಣಾ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಏಪ್ರಿಲ್ 25 ಮತ್ತು ಮೇ 6 ರ ನಡುವೆ ಎಂಟು ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏಪ್ರಿಲ್ 26 ಮತ್ತು 30 ಮತ್ತು ಮೇ 6 ಮತ್ತು 7 ರಂದು ನಾಲ್ಕು ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ. ಇದಲ್ಲದೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮೇ 3 ಮತ್ತು 5 ರ ನಡುವೆ ಐದು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.